ಬೆಂಗಳೂರು: ಹೊಸ ವರ್ಷಾಚರಣೆಗೆ ಸ್ನೇಹಿತನೊಂದಿಗೆ ಪಬ್‌ಗೆ ತೆರಳಿದ್ದ ಯುವತಿಯನ್ನ ಅಪರಿಚಿತನೋರ್ವ ಅಸಭ್ಯವಾಗಿ ಸ್ಪರ್ಶಿಸಿರುವ ಆರೋಪ ಕೇಳಿ ಬಂದಿದೆ. ತಡರಾತ್ರಿ ಕಾಡುಬೀಸನಹಳ್ಳಿಯ ಪಬ್‌ನಲ್ಲಿ ಘಟನೆ ನಡೆದಿದ್ದು, ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ನೇಹಿತನೊಂದಿಗೆ ರಾತ್ರಿ ಪಬ್‌ಗೆ ಬಂದಿದ್ದ ಯುವತಿಯೊಂದಿಗೆ ಅಪರಿಚಿತನೋರ್ವ ಅಸಭ್ಯವಾಗಿ ಸ್ಪರ್ಶಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಸ್ಥಳದಲ್ಲೇ ಯುವತಿ ಕಿರುಚಿಕೊಂಡು ಪ್ರತಿರೋಧ ಒಡ್ಡಿದ್ದಾಳೆ. ಅಷ್ಟರಲ್ಲಾಗಲೇ ಸ್ಥಳದಿಂದ ಆರೋಪಿ ಕಾಲ್ಕಿತ್ತಿದ್ದಾನೆ. ಸೂಕ್ತ ಭದ್ರತೆ ಒದಗಿಸದ ಪಬ್ ಸಿಬ್ಬಂದಿ ವಿರುದ್ಧ ಯುವತಿ ಮತ್ತು ಆಕೆಯ ಸ್ನೇಹಿತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯ ಕುರಿತು ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪಬ್‌ನ ಸಿಸಿಟಿವಿ ದೃಶ್ಯಗಳನ್ನ ಸಂಗ್ರಹಿಸುತ್ತಿರುವುದಾಗಿ ತಿಳಿಸಿದ್ದಾರೆ.
PublicNext
01/01/2025 05:15 pm