ಚಿತ್ರದುರ್ಗ: ವ್ಯಕ್ತಿತ್ವ ವಿಕಸನ ಪ್ರತಿದಿನ ನಡೆಯುವಂತದು ಆಕರ್ಷಕ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ರೂಡಿಸಿಕೊಂಡರೆ ಜೀವನದಲ್ಲಿ ಯಶಸ್ಸು ಗಳಿಸಲು ರಹ ದಾರಿಯಾಗಲಿದೆ ಎಲ್ಲಾ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಅಭಿರುಚಿ ಬೆಳೆಸುವಂಥಾದರೆ ಮಾತ್ರ ವ್ಯಕ್ತಿತ್ವ ಕುಸುಮದಂತೆ ಅರಳಲು ಸಾಧ್ಯ ಎಂದು ಎಸ್.ಜೆ.ಎಂ ಕಾಲೇಜಿನ ಸಹಾಯಕ ಪಾಧ್ಯಪಕರಾದ ನವೀನ್ ಮಸ್ಕಲ್ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು
ತಾಲ್ಲೂಕಿನ ಸಿರಿಗೆರೆ ಸಮೀಪದ ಕಡ್ಲೆಗುದ್ದು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಥಮ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಹೊಸ ವರ್ಷದ ಹೊಸ್ತಿಲಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಈ ವಯಸ್ಸಿನಲ್ಲೇ ಎಲ್ಲಾ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಲ್ಲ ರಂಗಗಳಲ್ಲಿ ತಮ್ಮದೇ ಆದಂತಹ ಚಾಪನ್ನು ಮೂಡಿಸಬೇಕು ಪ್ರತಿನಿತ್ಯ ತಮ್ಮನ್ನು ತಾವು ತೊಡಗಿಸಿ ಕೊಂಡಾಗ ಮಾತ್ರ ಆಕರ್ಷಕ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಉತ್ತಮ ಚಿಂತನೆಗಳಿಂದ ಮಾತ್ರ ಉತ್ತಮ ವ್ಯಕ್ತಿತ್ವ ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಚುಟುಕು ಕವಿ ವಿನಾಯಕ ಅವರು ಮಾತನಾಡಿ ಹೊಸ ವರ್ಷದ ಈ ದಿನದಂದು ಶಾಲೆಯಲ್ಲಿ ಹಮ್ಮಿಕೊಂಡಿರುವಂತಹ ವ್ಯಕ್ತಿತ್ವ ವಿಕಸನ ಕಾರ್ಯಗಾರ ವಿನೂತನವಾಗಿದೆ ಹೊಸ ವರ್ಷ ಕೇವಲ ಆಚರಣೆಗೆ ಸೀಮಿತವಾಗದೆ ಉತ್ತಮ ವಿಚಾರವನ್ನು ತಿಳಿದುಕೊಳ್ಳಲು ಇಂತಹ ಕಾರ್ಯಗಳು ಅಗತ್ಯ ಪ್ರಥಮ್ ಸಂಸ್ಥೆಯವರಿಗೆ ಧನ್ಯವಾದಗಳು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಮಹೇಶ್ ಅವರು ಪ್ರತಿ ಹೊಸ ವರ್ಷದಂದು ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಸಕರಾತ್ಮಕ ಚಿಂತನೆಗಳು ಮೈಗೊಂಡು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುವಲ್ಲಿ ಸಹಾಯಕವಾಗುತ್ತದೆ ಎಂದರು.
ವಿದ್ಯಾರ್ಥಿನಿ ತನುಪ್ರಿಯ ಮಾತನಾಡಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಿಂದ ನಾನು ಜೀವನದಲ್ಲಿ ಆದರ್ಶವನ್ನು ಮೈಗೂಡಿಸಿಕೊಳ್ಳಲು ಸಹಾಯವಾಗುತ್ತದೆ ಹೊಸ ವರ್ಷ ಹೊಸ ಜೀವನವನ್ನು ಕಂಡುಕೊಳ್ಳಲು ಈ ಕಾರ್ಯಕ್ರಮ ಸ್ಪೂರ್ತಿಯಾಗಿದೆ ಎಂದರು
ಈ ಸಂದರ್ಭದಲ್ಲಿ ಶಿಕ್ಷಕರಾದ ಮಂಜುನಾಥ್, ನಾಗರಾಜ್, ಕರಿಬಸಪ್ಪ, ನಟರಾಜ್, ಮಂಜಪ್ಪ ಹಾಗೂ ಮಹಾಂತೇಶ್ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Kshetra Samachara
01/01/2025 05:41 pm