ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಚ್ಚು ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಸನ್ಮಾನ

ಚಿತ್ರದುರ್ಗ: ಗ್ರಾಮದ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿಯಾಗಲು ಸಾಧ್ಯ ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ  ಸಭಾಂಗಣದಲ್ಲಿ ಬುಧವಾರ ಚಿತ್ರದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಗ್ರಾಮದ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿಯಾಗಲು ಸಾಧ್ಯ. ಹಾಗಾಗಿ ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಉತ್ತಮ ಅನುಷ್ಠಾನಕ್ಕೆ ಈ ಹೊಸ ವರ್ಷದ ದಿನ ಕಟಿಬದ್ಧರಾಗಬೇಕು ಎಂದು ತಿಳಿಸಿದ ಅವರು, ಉತ್ತಮ ಕರ ವಸೂಲಿ ಮಾಡಿರುವ ಗ್ರಾಮ ಪಂಚಾಯಿತಿಳಂತೆ ಇತರೆ ಗ್ರಾಮ ಪಂಚಾಯಿತಿಗಳೂ ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ತೆರಿಗೆಯಿಂದ ಸಂಗ್ರಹಿಸುವ ಆದಾಯವನ್ನು ತನ್ನ ಆಡಳಿತ ವ್ಯವಸ್ಥೆಯಲ್ಲಿ ಕೆಲಸ ನಿರ್ವಹಿಸುವ ನೌಕರರ ಸಂಬಳ, ಗ್ರಾಮದ ಅಭಿವೃದ್ಧಿಗೆ ಮತ್ತು ಅಲ್ಲಿನ ನಿವಾಸಿಗಳ ಮೂಲಭೂತ ಸೇವೆ ಒದಗಿಸಲು ಬಳಸಲಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಸೂಚನೆಯಂತೆ ಚಿತ್ರದುರ್ಗ ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳಲ್ಲಿ ಎಲ್ಲಾ ಸಿಬ್ಬಂದಿಗಳೂ ಕಳೆದ ಒಂದು ತಿಂಗಳಿಂದ ಅಭಿಯಾನದ ರೂಪದಲ್ಲಿ ಕರ ವಸೂಲಾತಿ ಆಂದೋಲನ ಹಮ್ಮಿಕೊಂಡಿದ್ದರಿಂದ ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ತಾಲ್ಲೂಕಿನ ರೂ. 12,44,11,412/-ಗಳ ಒಟ್ಟು ಬೇಡಿಕೆಯಲ್ಲಿ ರೂ.6,68,06,208/- ಕರ ವಸೂಲಿಯಾಗಿ ಡಿಸೆಂಬರ್ ಅಂತ್ಯಕ್ಕೆ ಶೇ.53.70 ಕರ ವಸೂಲಾತಿಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ಅತಿ ಹೆಚ್ಚು ಕರ ವಸೂಲಿ ಮಾಡಿರುವ ಆಲಗಟ್ಟ (ಶೇ.82.98), ಇಂಗಳದಾಳ್(ಶೇ.87.29), ಜಿ.ಆರ್.ಹಳ್ಳಿ(ಶೇ.84.47) ಮತ್ತು ಮಾಡನಾಯಕನಹಳ್ಳಿ (ಶೇ.86.28) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಪ್ರಮುಖವಾಗಿ ಬಿಲ್ ಕಲೆಕ್ಟರ್‍ಗಳನ್ನು ಸನ್ಮಾನಿಸಲಾಯಿತು.

Edited By : PublicNext Desk
Kshetra Samachara

Kshetra Samachara

01/01/2025 05:49 pm

Cinque Terre

1.68 K

Cinque Terre

0

ಸಂಬಂಧಿತ ಸುದ್ದಿ