ಶಿವಮೊಗ್ಗ : ಹೊಸ ವರ್ಷದ ಸಂಭ್ರಮದ ವೇಳೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರನೊಬ್ಬ ಶಿವಮೊಗ್ಗ ನಗರದ ಸಿದ್ದಯ್ಯ ರಸ್ತೆಯಲ್ಲಿ ಸಾವನಪ್ಪಿರುವ ಘಟನೆ ನಡೆದಿದೆ.. ಇನ್ನು ಭೀಕರ ಅಪಘಾತದ ದೃಶ್ಯ ಸಿಟಿಟಿವಿಯಲ್ಲಿ ಸೆರೆಯಾಗಿದ್ದು ವೀಡಿಯೋ ನೋಡಿದ್ರೆ ಒಂದು ಕ್ಷಣ ಬೆಚ್ಚಿ ಬೀಳಿಸುವಂತಿದೆ.
ಅಪಘಾತದಲ್ಲಿ ಗೋಪಾಳ ನಿವಾಸಿ 20 ವರ್ಷದ ಧನುಷ್ ಸಾವನಪ್ಪಿದ್ದಾನೆ. ಇನ್ನು ಬೈಕ್ ಗೆ ಡಿಕ್ಕಿ ಹೊಡೆದು ಕಾರ್ ಪಲ್ಟಿಯಾಗುವ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಮತ್ತೊಬ್ಬ ಯುವಕ ಗಂಭೀರ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಈ ಸಂಬಂಧ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
01/01/2025 06:02 pm