ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಚಾಕು ಇರಿದ ಪರಿಣಾಮ ಯುವಕನೊಬ್ಬ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಈಗಷ್ಟೇ ನಡೆದಿದೆ.
ಚಾಕು ಇರಿತಕ್ಕೆ ಒಳಗಾದ ಯುವಕನನ್ನು ಮಾರುತಿ ಅಂತಾ ಗುರುತಿಸಲಾಗಿದೆ. ಈತ ಅಂಬೇಡ್ಕರ್ ಕಾಲೊನಿಯ ನಿವಾಸಿ ಅಂತ ತಿಳಿದುಬಂದಿದೆ. ಇಂದು ಸಂಜೆ ಅಯೋಧ್ಯ ನಗರದ ವಾಟರ್ ಟ್ಯಾಂಕ್ ಬಳಿಯಲ್ಲಿ ಇಂದು ಸಂಜೆ 4.30ರ ಸುಮಾರಿಗೆ ನಿಂತಾಗ ಮೂರ್ನಾಲ್ಕು ಯುವಕರು ಬಂದು ಚಾಕು ಇರಿದು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.
ಮಾರುತಿಯ ಬೆನ್ನು ಹಾಗೂ ಪಕ್ಕೆಲುಬಿಗೆ ಚಾಕು ಇರಿಯಲಾಗಿದ್ದು ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಮಾರುತಿಯನ್ನು ಆತನ ಅಣ್ಣನಾದ ಅಶೋಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಿಮ್ಸ್ ಆಸ್ಪತ್ರೆಗೆ ಕಾನೂನು ಸುವ್ಯವಸ್ಥೆ ಡಿಸಿಪಿ ನಂದಗಾವಿ ಭೇಟಿ ನೀಡಿ ಗಾಯಾಳು ಹಾಗೂ ಸಂಬಂಧಿಕರಿಂದ ಮಾಹಿತಿ ಪಡೆದಿದ್ದಾರೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೋಲಿಸರು ಕೊಲೆ ಯತ್ನದ ಪ್ರಕರಣ ದಾಖಲಿಸಿಕೊಂಡು ಚಾಕು ಇರಿದು ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಜಾಲ ಬಿಸಿದ್ದಾರೆ.
-ವಿನಯ ರೆಡ್ಡಿ ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್
Kshetra Samachara
01/01/2025 06:13 pm