ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ತೆರಳುತ್ತಿದ್ದವರ ಕಾರು ಅಪಘಾತಕ್ಕೀಡಾದ ಘಟನೆ ಇಂದು ಮುಂಜಾನೆ ಬೆಳ್ಳಂದೂರು ಬಳಿ ಸಂಭವಿಸಿದೆ.
ತಡರಾತ್ರಿ ಕೋರಮಂಗಲದಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿದ್ದ ಮೂವರು ಯುವಕರು ಹಾಗೂ ಓರ್ವ ಯುವತಿಯಿದ್ದ ತಂಡ ಕಾರಿನಲ್ಲಿ ಯಮಲೂರು ಕಡೆ ತೆರಳುತ್ತಿತ್ತು. ಈ ವೇಳೆ ಬೆಳ್ಳಂದೂರು ಕೆರೆ ಬಳಿಯಿರುವ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಮಾರ್ಷಲ್‌ಗಳು ಕಾರಿನಲ್ಲಿದ್ದವರಿಗೆ ಸಹಾಯ ಒದಗಿಸಿ ಕಳಿಸಿ ಕೊಟ್ಟಿದ್ದಾರೆ. ಬೆಳ್ಳಂದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
01/01/2025 06:18 pm