ಚಿಕ್ಕಮಗಳೂರು: ಹಿರೇಮಗಳೂರಿನ ಪ್ರಭುಲಿಂಗ ಪ್ರೌಢಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಾನಿಗಳ ನೆರವಿನಿಂದ ಸುಮಾರು 1 ಲಕ್ಷ ಮೌಲ್ಯದ ಡೆಸ್ಕ್ ಬೆಂಚುಗಳನ್ನು ಶಾಲೆಗೆ ಕೊಡುಗೆಯಾಗಿ ದಾನಿ ಆರ್.ಎಂ.ಉಮಾಮಹೇಶ್ವರಪ್ಪ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು ಸರ್ಕಾರಿ ಶಾಲೆಗಳ ಮಕ್ಕಳು ದೇಶದ ಭವಿಷ್ಯವನ್ನು ರೂಪಿಸುವಂಥ ಪ್ರಜೆಗಳು. ದೇಶದ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಸೇರಿದಂತೆ ಅನೇಕ ಗಣ್ಯರು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಪೂರೈಸಿ ಸಾಧಕರಾದವರು ಎಂದರು. ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಬೋಧಕರಿಂದ ಸರ್ಕಾರಿ ಶಾಲೆಯ ಮಕ್ಕಳು ದೇಶ-ವಿದೇಶದಲ್ಲಿ ಛಾಪು ಮೂಡಿಸಿದ್ದಾರೆ. ಮಕ್ಕಳು ಕೀಳರಿಮೆ ಹೊಂದದೇ ದಾನಿಗಳು ಹಾಗೂ ಸಂಘ-ಸoಸ್ಥೆಗಳ ನೆರವಿನಿಂದ ದೊರೆಯುವ ಸೌಲಭ್ಯವನ್ನು ಪಡೆದುಕೊಂಡು ಉತ್ತಮ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನಹರಿಸಬೇಕೆಂದರು.
Kshetra Samachara
01/01/2025 06:29 pm