ಚಿಕ್ಕಮಗಳೂರು: ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಕೇಕ್ ಕತ್ತರಿಸಿ,ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಮತ್ತು ಪೇಶ್ವೆಗಳ ನಡುವೆ ಭೀಮಾ ಕೋರೆಗಾಂವ್ ನಲ್ಲಿ ಜನವರಿ 1, 1818ರಲ್ಲಿ ನಡೆದ ಐತಿಹಾಸಿಕ ಯುದ್ದದಲ್ಲಿ ಐನೂರು ಮಂದಿ ದಲಿತ ಹೋರಾಟಗಾರರು ಆಹಾರ, ನೀರು ಹಾಗೂ ವಿಶ್ರಾಂತಿಯಿಲ್ಲದೆ ಸಾವಿರಾರು ಮಂದಿಯ ಸೈನ್ಯದ ವಿರುದ್ಧ ಕಾದಾಡಿದ ಕ್ಷಣವು ಎಲ್ಲರಿಗೂ ಸ್ಪೂರ್ತಿದಾಯಕ ಎಂದರು.
ಪರಿಶಿಷ್ಟರು, ಹಿಂದುಳಿದ ಮತ್ತು ಶೋಷಿತರ ಶೌರ್ಯದ ಸಂಕೇತವೇ ಭೀಮಾ ಕೋರೆಗಾಂವ್ ಯುದ್ಧವಾಗಿದೆ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲುಕೀಳುಗಳ ವಿರುದ್ಧ ನಿಂತು ಮಾನವೀಯ ವೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹಾರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟವಾಗಿದೆ ಎಂದು ಬಣ್ಣಿಸಿದರು.
Kshetra Samachara
01/01/2025 06:43 pm