ಸೋಮವಾರಪೇಟೆ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ತೀವ್ರ ಗಾಯಗೊಂಡು ಹುತಾತ್ಮರಾದ ಸೈನಿಕ ಪಿ.ಪಿ.ದಿವಿನ್ ಅವರ ಅಂತ್ಯಕ್ರಿಯೆಯು ಹುಟ್ಟೂರಾದ ಕೊಡಗು ಜಿಲ್ಲೆಯ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಸಾಂಪ್ರದಾಯಿಕ ವಿಧಿ ವಿಧಾನಗಳ ನಂತರ ಮಾಲಂಬಿಯ ಜಮೀನಿನಲ್ಲಿ ಅಗ್ನಿಸ್ಪರ್ಶ ಮಾಡುವುದರೊಂದಿಗೆ ದಿವಿನ್ ಪಂಚಭೂತಗಳಲ್ಲಿ ಲೀನವಾದರು. ಇದಕ್ಕೂ ಮೊದಲು ಮೇಜರ್ ನಿಖಿಲ್ ಹಾಗೂ ಸುಬೇದಾರ್ ಮಹೇಶ್ ಜಾಧವ್ ಅವರ ನೇತೃತ್ವದಲ್ಲಿ ಆಗಮಿಸಿದ್ದ ಭಾರತೀಯ ಸೇನಾ ತಂಡ ಹಾಗೂ ಪೊಲೀಸರು ಕುಶಾಲತೋಪು ಸಿಡಿಸಿ ಅಂತಿಮ ಗೌರವ ಸಲ್ಲಿಸಿದರು.
PublicNext
01/01/2025 07:47 pm