ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕರ ಗುಂಪೊಂದು ಮೂವರ ಮೇಲೆ ಹಲ್ಲೆ ಮಾಡಿರುವ ಘಟನೆ ಬಿಡನಾಳದ ಕೆಎಲ್ಇ ಮೆಡಿಕಲ್ ಕಾಲೇಜ್ ಆವರಣದಲ್ಲಿ ನಡೆದಿದೆ.
ಗಾಯಗೊಂಡವರನ್ನು ಸಂತೋಷ (54), ಬಚ್ಚು (40), ಬಿಕ್ರಮ್ (34) ಎಂದು ಗುರುತಿಸಲಾಗಿದೆ. ಇಂದು ಹೊಸ ವರ್ಷದ ನಿಮಿತ್ತ ಕೆಲಸಕ್ಕೆ ರಜೆ ಇದ್ದ ಹಿನ್ನೆಲೆ ತಾವು ವಾಸಿಸುತ್ತಿದ್ದ ಸ್ಥಳದಲ್ಲಿದ್ದ ವೇಳೆ ನೀರಿನ ವಿಚಾರಕ್ಕೆ ಅದೇ ಕೆಎಲ್ಇ ಸಂಸ್ಥೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಹತ್ತಾರು ಮಂದಿಯ ಗುಂಪು ಏಕಾಏಕಿ ದಾಳಿ ಮಾಡಿದೆ.
ಈ ವೇಳೆ ಕಟ್ಟಿಗೆಯಿಂದ ಹಲ್ಲೆ ಮಾಡಿದ ಪರಿಣಾಮ ಸಂತೋಷ, ಬಚ್ಚು ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಮ್ಸ್ ಆಸ್ಪತ್ರೆಗೆ ಕಸಬಾಪೇಟೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಪೆಷಲ್ ಇಂಟಲಿಜೆನ್ಸಿ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
01/01/2025 08:05 pm