ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ - ಒರ್ವ ವಿದ್ಯಾರ್ಥಿ ಸಾವು ,ಹಲವು ಮಂದಿಗೆ ಗಾಯ

ಕಾಸರಗೋಡು: ಕಣ್ಣೂರಿನ ಚೆಂಗಲಾಯಿ ಪಂಚಾಯತ್‌ನ ವಳಕ್ಕೈ ಎಂಬಲ್ಲಿ ಬುಧವಾರ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ತಾಳಿಪರಂಬ - ಇರಿಟ್ಟಿ ಹೆದ್ದಾರಿಯಲ್ಲಿ ಸಂಜೆ 4.15ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 11 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಂಚಾಯಿತಿಯ ಚಿನ್ಮಯ ವಿದ್ಯಾಲಯಕ್ಕೆ ಸೇರಿದ ಶಾಲಾ ಬಸ್ ಇಳಿಜಾರಾಗಿ ಬಂದು ಹೆದ್ದಾರಿ ಪ್ರವೇಶಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಸ್ಥಳಕ್ಕೆ ಧಾವಿಸಿದ ನಿವಾಸಿಗಳು ವಿದ್ಯಾರ್ಥಿಗಳನ್ನು ತಳಿಪರಂಬ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರ ದೇಹವನ್ನು ಪರಿಯಾರಂನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಬ್ರೇಕ್ ವೈಫಲ್ಯವು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ.

Edited By : Vinayak Patil
PublicNext

PublicNext

01/01/2025 08:33 pm

Cinque Terre

125.11 K

Cinque Terre

0