ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಯೋಕಾನ್ ಉದ್ಯೋಗಿ 'ರುಚಿತಾ' ಆತ್ಮಹತ್ಯೆ

ಬೆಂಗಳೂರು: ಬಯೋಕಾನ್ ಸಂಸ್ಥೆಯಲ್ಲಿ ಜೂನಿಯರ್ ಎಕ್ಸಿಕ್ಯೂಟಿವ್ ಸೇವೆ ಸಲ್ಲಿಸುತ್ತಿದ್ದ ರುಚಿತಾ (25) ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಲ್ಲಸಂದ್ರದಲ್ಲಿ ಈ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ರುಚಿತ ಮೂಲತಃ ಆಂಧ್ರದ ಅನಂತಪುರ ಜಿಲ್ಲೆಯ ಬೆಸ್ತರಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ರುಚಿತಾ ತಂದೆ ತಾಯಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗಳು ಫೋನ್ ಕಾಲ್ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಅನುಮಾನಗೊಂಡು ಮನೆಗೆ ಆಗಮಿಸಿದ್ದಾರೆ. ಈ ವೇಳೆ ಮಗಳು ರುಚಿತ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣವನ್ನು ದಾಖಲಿಸಿಕೊಂಡ ಬಾಗಲಕುಂಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Edited By : Nagaraj Tulugeri
PublicNext

PublicNext

01/01/2025 08:41 pm

Cinque Terre

135.12 K

Cinque Terre

0