ನವದೆಹಲಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಒಂಬತ್ತು ತಿಂಗಳಲ್ಲಿ ಟೆಸ್ಟ್ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ 33 ಸ್ಥಾನಗಳನ್ನು ಕಳೆದುಕೊಂಡಿದ್ದಾರೆ.
ಐಸಿಸಿ ಬುಧವಾರ ಬಿಡುಗಡೆಯಾದ ಇತ್ತೀಚಿನ ಶ್ರೇಯಾಂಕದಲ್ಲಿ ರೋಹಿತ್ ಶರ್ಮಾ 40ನೇ ಸ್ಥಾನದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಅವರ ಬ್ಯಾಟಿಂಗ್ ಸರಾಸರಿ ಆರು ವರ್ಷಗಳ ಕನಿಷ್ಠ 40.57ಕ್ಕೆ ಇಳಿದಿದೆ. ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ರೋಹಿತ್ ಐದು ಇನ್ನಿಂಗ್ಸ್‌ಗಳಲ್ಲಿ 31 ರನ್ ಗಳಿಸಿದ್ದಾರೆ.
PublicNext
02/01/2025 08:14 am