ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡಿದ್ದಾರೆ.
ಅಡುಗೆ ಸಹಾಯಕಿ ಉಮಾದೇವಿ (52) ಗಂಭೀರ ಗಾಯಗಳಾಗಿದ್ದು, ಜಯಮ್ಮ (55) ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೊಸ ವರ್ಷದ ಮಧ್ಯಾಹ್ನ ಬಿಸಿಯೂಟ ತಯಾರಿಸುವಾಗ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಅಡುಗೆ ಸಹಾಯಕಿ ಉಮಾದೇವಿಗೆ ಮಧುಗಿರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈ ಮೇಲೆ ಶೇಕಡಾ 30 ಸುಟ್ಟ ಗಾಯಗಳಾಗಿದ್ದು, ಗುಣಮಟ್ಟದ ಕುಕ್ಕರ್ ಕೊಡದೆ ಇರುವುದೇ ಘಟನೆಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೇಲಧಿಕಾರಿಗಳು ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿರುವ ಆರೋಪಗಳೂ ಕೇಳಿ ಬರುತ್ತಿದೆ.
ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
02/01/2025 09:26 am