ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜೂನಿಯರ್ ಎಕ್ಸಿಕ್ಯುಟಿವ್ ಯುವತಿ ಆತ್ಮಹತ್ಯೆ

ಬೆಂಗಳೂರು: ಬಯೋಕಾನ್ ಕಂಪನಿಯ ಜೂನಿಯರ್ ಎಕ್ಸಿಕ್ಯುಟಿವ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಲ್ಲಸಂದ್ರದಲ್ಲಿ ನಡೆದಿದೆ.

ಅನಂತಪುರ ಜಿಲ್ಲೆ ಕಲ್ಯಾಣದುರ್ಗದ ಬೆಸ್ತರಹಳ್ಳಿ ಮೂಲದ ರುಚಿತಾ (25) ಮನೆಯಲ್ಲಿ ಯಾರು ಇಲ್ಲದ ವೇಳೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಮನೆಯವರಿಗೂ ಏನೆಂದು ತಿಳಿಯದ ರಹಸ್ಯವಾಗಿದೆ.

ಮೃತ ರುಚಿತಾ ಪೋಷಕರು ಪೀಣ್ಯ 2ನೇ ಹಂತದ ಹೆಗ್ಗನಹಳ್ಳಿ ಬಟ್ಟೆ ಅಂಗಡಿಯಲ್ಲಿದ್ದ ವೇಳೆ ಮಗಳು ರುಚಿತಾ ಆತ್ಮಹತ್ಯೆಗೆ ಶರಣಾಗಿದ್ದು, ಎಷ್ಟು ಬಾರಿ ಕರೆ ಮಾಡಿದರೂ ಸ್ವೀಕರಿಸದ ಹಿನ್ನೆಲೆ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Suman K
PublicNext

PublicNext

02/01/2025 12:18 pm

Cinque Terre

57.13 K

Cinque Terre

0