ಹೊಸದುರ್ಗ: ಹೊಸದುರ್ಗ ತಾಲ್ಲೂಕಿನ ಹಾಲು ರಾಮೇಶ್ವರ ಸಮೀಪದಲ್ಲಿ ಪ್ಯಾಸೆಂಜರ್ ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಗೂಳಿಹಟ್ಟಿ ಕಡೆಯಿಂದ ಹೊಸದುರ್ಗ ಪಟ್ಟಣದಕ್ಕೆ ತೆರಳುವ ವೇಳೆ ಈ ಅಪಘಾತ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಪ್ಯಾಸೆಂಜರ್ ಆಟೋ ಚಾಲಕನ ಅತಿ ವೇಗ & ಅಜಾಗರೂಕತೆಯಿಂದ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಹೊಸದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
02/01/2025 01:19 pm