ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಕೃಷಿ ಹೊಂಡದಲ್ಲಿ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವು

ವಿಜಯಪುರ: ಕೃಷಿ ಹೊಂಡದಲ್ಲಿ ಬಿದ್ದು ತಾಯಿ ಹಾಗೂ ಇಬ್ಬರು ಮಕ್ಕಳ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಗ್ರಾಮದಲ್ಲಿ ಸಂಭವಿಸಿದೆ.

ಮೃತ ದುರ್ದೈವಿಗಳನ್ನ ಗೀತಾ ಬಡಗಿ (28), ಶ್ರವಣ (6) ಹಾಗೂ ಶರಣ್ (4) ಎಂದು ಗುರುತಿಸಲಾಗಿದೆ. ಯಾಳವಾರ ಗ್ರಾಮದ ಶ್ರೀಶೈಲ ಜೊತೆ ಮದುವೆಯಾಗಿದ್ದ ಗೀತಾ ಗಂಡನ ಜೊತೆ ಜಗಳವಾಡಿ ಇಬ್ಬರು ಗಂಡು ಮಕ್ಕಳೊಂದಿಗೆ ತವರು ಮನೆಗೆ ಬಂದಿದ್ದರು ಎನ್ನಲಾಗಿದೆ.

ತಂದೆ ರಾಮಪ್ಪ ನಾಯ್ಕೋಡಿ ಅವರ ಜಮೀನಿನಲ್ಲಿದ್ದ ಕೃಷಿ ಹೊಂಡದ ಬಳಿ ಮಕ್ಕಳೊಂದಿಗೆ ತೆರಳಿದ್ದಾಗ ಮಕ್ಕಳೊಂದಿಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳೀಯರು ಮೂವರ ಶವಗಳನ್ನು ಹೊರ ತೆಗೆದಿದ್ದಾರೆ. ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ದೇವರಹಿಪ್ಪರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ ವಿಜಯಪುರ

Edited By : Suman K
Kshetra Samachara

Kshetra Samachara

02/01/2025 01:24 pm

Cinque Terre

6.14 K

Cinque Terre

0