ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬಾಣಂತಿಯರ ಸಾವು ಪ್ರಕರಣ - ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ, ಮಹಿಳಾ ಮೋರ್ಚಾ ಒತ್ತಾಯ

ಉಡುಪಿ: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಆಗುತ್ತಿರುವ ಬಾಣಂತಿಯರ ಸಾವುಗಳನ್ನು ತಡೆಯಲು ವಿಫಲರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮಹಿಳಾಮೋರ್ಚಾದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಒತ್ತಾಯಿಸಿದರು.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಣಂತಿಯರ ಸಾವಿನ ನೈಜ ಕಾರಣಗಳನ್ನು ತಿಳಿಯಲು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಕಾಂಗ್ರೆಸ್ ಸರಕಾರವು ಆತ್ಮಹತ್ಯೆ ಹಾಗೂ ಹತ್ಯೆ ಭಾಗ್ಯವನ್ನು ಕರ್ನಾಟಕದ ಜನತೆಗೆ ನೀಡಿದೆ. ಕಳೆದ 19 ತಿಂಗಳಲ್ಲಿ 6 ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, 700 ಕ್ಕೂ ಹೆಚ್ಚು ಗರ್ಭಿಣಿಯರು, 1100 ಕ್ಕೂ ಅಧಿಕ ನವಜಾತ ಶಿಶುಗಳ ಸಾವಿಗೆ ಕಾಂಗ್ರೆಸ್ ಸರಕಾರ ಕಾರಣವಾಗಿದೆ. ಗರ್ಭಿಣಿಯರ ಆರೈಕೆಗಾಗಿ ಕೇಂದ್ರ ಸರಕಾರ ಜಾರಿಗೊಳಿಸಿರುವ ಜನನಿ ಸುರಕ್ಷಾ ಯೋಜನೆ, ಜನನಿ ಶಿಶು ಸುರಕ್ಷಾ ಕಾರ್ಯಕ್ರಮ ಮೊದಲಾದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿ ಸರಕಾರದ ಹೊಣೆಗೇಡಿ ತನದಿಂದಾಗಿ ಸಂಪೂರ್ಣ ಹದಗೆಟ್ಟಿದೆ. ಸಿಬ್ಬಂದಿ ಕೊರತೆಯಿಂದ ಸೊರಗುತ್ತಿದೆ ಎಂದು ದೂರಿದರು.

ಸರಕಾರಿ ಆಸ್ಪತ್ರೆಗಳಲ್ಲಿ ಮೃತಪಟ್ಟ ಬಾಣಂತಿಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಬೇಕು. ಅನಾಥಗೊಂಡಿರುವ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರ ಆ ಮಕ್ಕಳನ್ನು ದತ್ತು ಪಡೆಯಬೇಕು ಎಂದರು.

Edited By : PublicNext Desk
Kshetra Samachara

Kshetra Samachara

02/01/2025 02:09 pm

Cinque Terre

5.46 K

Cinque Terre

0

ಸಂಬಂಧಿತ ಸುದ್ದಿ