ಹುಬ್ಬಳ್ಳಿ : ಅಯೋಧ್ಯ ನಗರದಲ್ಲಿ ಬುಧವಾರ ಹಾಡುಹಗಲೇ ಯುವಕನೊಬ್ಬನ ಮೇಲೆ ಮಾರಣಾಂತಿಕ ವಾಗಿ ನಡು ರಸ್ತೆಯಲ್ಲಿಯೇ ಚಾಕು ಇರಿದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಬಂಧನ ಮಾಡಿ ಜೈಲಿಗೆ ಅಟ್ಟಿದ್ದಾರೆ.
ಬುಧವಾರ ಸಂಜೆ 4.30 ರ ಸುಮಾರಿಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಯೋದ್ಯ ನಗರದ ವಾಟರ್ ಟ್ಯಾಂಕ್ ಬಳಿಯಲ್ಲಿ ಮಾರುತಿ ಎಂಬ ಯುವಕನ ಮೇಲೆ ಐದಾರು ಯುವಕರಿದ್ದ ಯುವಕರ ಗುಂಪು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ ಮೇಲೆ ಏಕಾಏಕಿ ದಾಳಿಯನ್ನು ನಡೆಸಿ ಚಾಕು ಇರಿದು ಪರಾರಿಯಾಗಿದ್ದರು. ಇತ್ತ ಗಾಯಗೊಂಡಿದ್ದ ಮಾರುತಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಕೊಲೆ ಯತ್ನ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆಗೆ ಇಳಿದಾಗ ಇದು ಈ ಹಿಂದೆ ಶಾಲೆ ಒಂದರ ಗ್ಯಾದರಿಂಗ್ ನಲ್ಲಿ ಇವರ ನಡುವೆ ಗಲಾಟೆ ನಡೆದಿತ್ತು ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು.ಹೀಗಾಗಿ ಸೇಡು ತೀರಿಸಿಕೊಳ್ಳಲು ಈ ಕೃತ್ಯ ನಡೆಸಿದ್ದರು ಎಂಬ ಪ್ರಾಥಮಿಕ ಮಾಹಿತಿ ಇದೀಗ ಲಭ್ಯವಾಗಿದೆ ಅಂತಾರೆ ಕಾನೂನು ಸುವ್ಯವಸ್ಥೆ ಡಿಸಿಪಿ ನಂದಗಾವಿ.
ಸದ್ಯ ಘಟನೆ ನಡೆದ 24 ಗಂಟೆಯಲ್ಲಿಯೇ ಸಾರ್ವಜನಿಕ ಸ್ಥಳದಲ್ಲೇ ಮಾರಕಾಸ್ತ್ರ ಹಿಡಿದು ಅಟ್ಟಹಾಸ ಮೆರೆದಿದ್ದ ದುರುಳರನ್ನು ಕಂಬಿ ಹಿಂದೆ ತಳ್ಳುವಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.ಅಷ್ಟೇ ಅಲ್ಲದೇ ಈ ರೀತಿಯ ಕೃತ್ಯಗಳು ಕಂಡು ಬಂದಲ್ಲಿ ಪೊಲೀಸ್ ಕಂಟ್ರೋಲ್ ರೂಮ್'ಹಾಗೂ 112 ಗೆ ಮಾಹಿತಿಯನ್ನು ಕೊಡಿ ಅಂತಾ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.
ವಿನಯ ರೆಡ್ಡಿ ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
02/01/2025 02:41 pm