ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಫೆಬ್ರವರಿ 20 ರಿಂದ 26ರವರೆಗೆ 95ನೇ ಶಿವನಾಮ ಸಪ್ತಾಹ ಕಾರ್ಯಕ್ರಮ

ಚಿತ್ರದುರ್ಗ: ಚಿತ್ರದುರ್ಗ ನಗರದ ಕಬೀರಾನಂದ ನಗರದಲ್ಲಿನ ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ 2025ರ ಫೆಬ್ರವರಿಯಲ್ಲಿ ನಡೆಯಲಿರುವ 95ನೇ ಶಿವನಾಮ ಸಪ್ತಾಹದ ಅಂಗವಾಗಿ ಪೂರ್ವಬಾವಿ ಸಭೆಯನ್ನು ಕರೆಯಲಾಗಿದೆ ಎಂದು ಶ್ರೀ ಗುರು ಕಬೀರಾನಂದಾಶ್ರಮದ ಕಾರ್ಯದರ್ಶಿಗಳಾದ ವಿ.ಎಲ್ ಪ್ರಶಾಂತ್ ತಿಳಿಸಿದ್ದಾರೆ.

2025ರ ಫೆಬ್ರವರಿ20 ರಿಂದ 26ರವರೆಗೆ ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ 95ನೇ ಶಿವನಾಮ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಇದರ ರೂಪು ರೇಷೇಗಳನ್ನು ಸಿದ್ದ ಪಡಿಸುವ ಹಿನ್ನಲೆಯಲ್ಲಿ ಜ. 04ರ ಶನಿವಾರ ಮಧ್ಯಾಹ್ನ 4.30ಕ್ಕೆ ಶ್ರೀ ಸದ್ಗುರು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಪೂರ್ವ ಭಾವಿ ಸಭೆಯನ್ನು ಕರೆಯಲಾಗಿದೆ ಈ ಸಭೆಗೆ ಸರ್ವ ಭಕ್ತಾಧಿಗಳು ಆಗಮಿಸುವುದರ ಮೂಲಕ ಶಿವನಾಮ ಸಪ್ತಾಹ ಯಶಸ್ವಿಗೆ ಸಲಹೆ ಸಹಕಾರವನ್ನು ನೀಡುವಂತೆ ಪ್ರಶಾಂತ್ ಮನವಿ ಮಾಡಿದ್ದಾರೆ.

Edited By : PublicNext Desk
Kshetra Samachara

Kshetra Samachara

02/01/2025 02:53 pm

Cinque Terre

800

Cinque Terre

0