ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬುದ್ಧಿವಂತರಾಗಿ ನಿಮ್ಮ ಮಕ್ಕಳಿಗೆ ಸಂಪೂರ್ಣ ಲಸಿಕೆಗಳನ್ನು ಕೊಡಿಸಿ: ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್

ಚಿತ್ರದುರ್ಗ: ಚಿತ್ರದುರ್ಗ ನಗರದ ಕೊಳಚೆ ಪ್ರದೇಶ ವೆಂಕಟೇಶ್ವರ ಬಡಾವಣೆ ಚಳ್ಳಕೆರೆ ರಸ್ತೆ ಅಂಗನವಾಡಿ ಕೇಂದ್ರದಲ್ಲಿ ಲಸಿಕ ಅಧಿವೇಶನದಲ್ಲಿ ತಾಯಂದಿರ ಸಭೆಗೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿ ಎಲ್ಲಾ ತಾಯಂದಿರು ತಮ್ಮ ಮಕ್ಕಳಿಗೆ ತಪ್ಪದೇ 12 ಮಾರಕ ರೋಗಗಳ ವಿರುದ್ಧ ಲಸಿಕೆಗಳನ್ನು ಕೊಡಿಸಿ ನಿಮ್ಮ ಮಕ್ಕಳನ್ನು ರಕ್ಷಿಸಿ ಪ್ರತಿ ತಿಂಗಳು ಅಂಗನವಾಡಿ ಕೇಂದ್ರದಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನಡೆಯುತ್ತದೆ ಎಂದರು.

ಸರ್ಕಾರದಿಂದ ಉಚಿತವಾಗಿ ಲಸಿಕೆಯನ್ನು ನೀಡಲಾಗುತ್ತದೆ ಬುದ್ಧಿವಂತರಾಗಿ ನಿಮ್ಮ ಮಕ್ಕಳಿಗೆ ಸಂಪೂರ್ಣ ಲಸಿಕೆಗಳನ್ನು ಕೊಡಿಸಿ ಎಂದರು,

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್ಎಸ್ ಮಂಜುನಾಥ್ ಮಾತನಾಡಿ ಬಾಲ್ಯ ವಿವಾಹವನ್ನು ಮಾಡಬೇಡಿ ಶಿಕ್ಷಣ ಮೊದಲು ನಂತರ ಮದುವೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಹಳಷ್ಟು ಕಠಿಣವಾಗಿದೆ, ಬಾಲ್ಯ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ. ಬೇಟಿ ಬಚಾವೋ ಬೇಟಿ ಪಡಾವೋ ಬಾಲ್ಯ ವಿವಾಹಗಳನ್ನು ನಿಲ್ಲಿಸುವುದರಿಂದ ತಾಯಿ ಮರಣ ಶಿಶು ಮರಣ ಪ್ರಮಾಣ ತಗ್ಗಿಸಬಹುದು ಎಂದರು,..

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ ಮುಗಪ್ಪ ಮಾತನಾಡಿ ಕುಟುಂಬ ಕಲ್ಯಾಣ ವಿಧಾನಗಳನ್ನು ಅನುಸರಿಸುವಲ್ಲಿ ಪುರುಷರ ಸಹಭಾಗಿತ್ವ ಬಹಳ ಪ್ರಮುಖವಾಗಿದೆ ಇಲಾಖೆಯು ಪುರುಷರಿಗಾಗಿ ಎನ್ ಎಸ್ ವಿ ಒಂದು ಸರಳ ಸುಲಭ ಹೊಲಿಗೆ ಹಾಕದಂತಹ ನೂತನ ಗರ್ಭ ನಿರೋಧಕ ಶಸ್ತ್ರಚಿಕಿತ್ಸಾ ವಿಧನವಾಗಿದೆ ಈ ತಾಯಂದಿರ ಸಭೆಯಲ್ಲಿ ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ ಮನೆಯಲ್ಲಿ ಕುಟುಂಬದ ಎಲ್ಲಾ ಸದಸ್ಯರು ಕುಳಿತು ವಿಚಾರ ಮಾಡಿ ನಿಮ್ಮ ಮನೆಯ ಪುರುಷರಿಗೆ ಈ ವಿಧಾನವನ್ನು ಉಪಯೋಗ ಮಾಡಿಕೊಳ್ಳುವಂತೆ ಸೂಚಿಸಿ ಎಂದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆರಾದ ರಂಗಮ್ಮ, ಆಶಾ, ರೇಣುಕಾ, ಅನುರಾಧ ಇದ್ದರು.

Edited By : PublicNext Desk
Kshetra Samachara

Kshetra Samachara

02/01/2025 03:21 pm

Cinque Terre

1.96 K

Cinque Terre

0

ಸಂಬಂಧಿತ ಸುದ್ದಿ