ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹದಿಹರೆಯದ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆ ಮತ್ತು ವೃತ್ತಿ ಸಮಾಲೋಚನೆ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ಸಹಯೋಗದೊಂದಿಗೆ 'ಬೇಟಿ ಬಚಾವೋ ಬೇಟಿ ಪಡಾವೋ'ಅಭಿಯಾನದ ಪ್ರಯುಕ್ತ ಇಂದು ಪೊಲಿಪು ಪದವಿಪೂರ್ವ ಕಾಲೇಜಿನಲ್ಲಿ "ಹದಿಹರೆಯದ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆ ಮತ್ತು ವೃತ್ತಿ ಸಮಾಲೋಚನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ಜಗತ್ತಿನಲ್ಲಿ ಹೆಣ್ಣು ಮಕ್ಕಳ ಪಾತ್ರ ಬಹುಮುಖ್ಯವಾದದ್ದು. ಹೆಣ್ಣು ಮಕ್ಕಳನ್ನು ರಕ್ಷಿಸುವ ಕಾರ್ಯವಾಗಬೇಕು. ಪ್ರಸ್ತುತ ಸಮಾಜದಲ್ಲಿ ವಿವಿಧ ಪಾಳಿಯಲ್ಲಿ ಉದ್ಯೋಗ ಮಾಡುವಂತಹ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಅತ್ಯಗತ್ಯ ಎಂದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷ ಹರಿಣಾಕ್ಷಿ ದೇವಾಡಿಗ, ಪುರಸಭೆಯ ಸದಸ್ಯರಾದ ರಾಧಿಕಾ, ಕಾಪು ತಹಶೀಲ್ದಾರ್ ಪ್ರತಿಭಾ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/01/2025 04:46 pm

Cinque Terre

1.89 K

Cinque Terre

0

ಸಂಬಂಧಿತ ಸುದ್ದಿ