ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಲಿದೆ. ಬಸ್ ಪ್ರಯಾಣ ದರ ಏರಿಕೆಗೆ ರಾಜ್ಯ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಶೀಘ್ರದಲ್ಲೇ ನಾಲ್ಕು ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳವಾಗಲಿದೆ.
ಬಸ್ ಪ್ರಯಾಣದರ ಹೆಚ್ಚಿಸುವಂತೆ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳು ಸಲ್ಲಿಸಿದ್ದ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಎಲ್ಲಾ ಸಚಿವರು ಬಸ್ ಟಿಕೆಟ್ ದರ ಹೆಚ್ಚಿಸಲು ಸಮ್ಮತಿ ಸೂಚಿಸಿದ್ದಾರೆ.
ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆ ಮಾಡಲು ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಬಿಸಿ ತಟ್ಟುವುದು ಖಚಿತವಾಗಿದೆ.
PublicNext
02/01/2025 04:58 pm