ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ಎರಡು ಗುಂಪುಗಳ ನಡುವೆ ಸಂಘರ್ಷ - ಕಟ್ಟೆಮಾಡು ಗ್ರಾಮದಲ್ಲಿ ನಿಷೇದಾಜ್ಞೆ ವಿಸ್ತರಣೆ

ಮಡಿಕೇರಿ : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಜಾತ್ರೋತ್ಸವದ ಸಂದರ್ಭ ಎರಡು ಗುಂಪುಗಳ ನಡುವಿನ ಸಂಘರ್ಷದ ಹಿನ್ನೆಲೆ ದೇವಸ್ಥಾನ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ ನಿಷೇದಾಜ್ಞೆಯನ್ನು ಜ.7 ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗೀಯ ದಂಡಾಧಿಕಾರಿ ವಿನಾಯಕ್ ನರ್ವಡೆ ಅವರು ಆದೇಶಿಸಿದ್ದಾರೆ.

ಸ್ಥಳದಲ್ಲಿ ಪ್ರಸ್ತುತ ಉಂಟಾಗಿರುವ ಬೆಳವಣಿಗೆಗಳ ಸಂಬಂಧ ಆರಕಕ್ಷ ಅಧೀಕ್ಷಕರ ಕೋರಿಕೆಯನ್ನು ಪರಿಗಣಿಸಿ, ಜ.2 ರ ಬೆಳಗ್ಗಿನಿಂದ ಜ.7ರ ಬೆಳಗ್ಗೆ 6ರವರೆಗೆ ದೇವಸ್ಥಾನದ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ವಿಧಿಸಲಾಗಿದೆ.

ಈ ಅವಧಿಯಲ್ಲಿ 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ, ಪ್ರತಿಭಟನೆ, ಮೆರವಣಿಗೆ, ರ‍್ಯಾಲಿ, ಜಾಥಾ ನಡೆಸದಂತೆ ಮತ್ತು ಪ್ರಚೋದನಾತ್ಮಕ ಘೋಷಣೆ ಕೂಗದಂತೆ ಆದೇಶದಲ್ಲಿ ತಿಳಿಸಲಾಗಿದೆ.

ಇತ್ತೀಚೆಗೆ ಜಿಲ್ಲಾಡಳಿತ ನಡೆಸಿದ ಶಾಂತಿ ಸಭೆಯಲ್ಲಿ, ಬೈಲಾ ಗೊಂದಲ ನಿವಾರಣೆಗೆ ಮುಂದಿನ ಸೋಮವಾರದವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು. ಅಗತ್ಯ ತೀರ್ಮಾನಗಳನ್ನು ಕೈಗೊಳ್ಳುವ ಸಲುವಾಗಿ ಜ.2 ರಂದು ಗ್ರಾಮಸ್ಥರು ದೇವಾಲಯದ ಆವರಣದಲ್ಲಿ ಸಭೆ ನಡೆಸುವ ಸಾಧ್ಯತೆ ಇತ್ತು. ಆದರೆ ಇದೀಗ ಜಿಲ್ಲಾಡಳಿತ ನಿರ್ಬಂಧಕಾಜ್ಞೆಯನ್ನು ವಿಸ್ತರಿಸಿರುವುದರಿಂದ ಸಭೆ ನಡೆಯುವ ಕುರಿತು ಗೊಂದಲ ಏರ್ಪಟ್ಟಿದೆ.

Edited By : Suman K
Kshetra Samachara

Kshetra Samachara

02/01/2025 05:41 pm

Cinque Terre

1.36 K

Cinque Terre

0

ಸಂಬಂಧಿತ ಸುದ್ದಿ