ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯುತ್ ತಂತಿಗಳ ಮೇಲೆ ಹಾಯಾಗಿ ಮಲಗಿದ ಭೂಪ ಕಾರಣ ಕೇಳಿದ್ರೆ ಶಾಕ್‌ ಆಗ್ತಿರಾ : ವಿಡಿಯೋ ವೈರಲ್

ಜನ ಎಣ್ಣೆ ಏಟಲ್ಲಿ ಕೆಲವರು ಮಾಡುವ ಅವಾಂತರ ಒಂದೆರಡಲ್ಲ ಸದ್ಯ ಆಂಧ್ರಪ್ರದೇಶದ ಪಾರ್ವತಿಪುರಂ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಮದ್ಯ ಖರೀದಿಗೆ ಅಮ್ಮ ಹಣ ಕೊಡಲಿಲ್ಲ ಎಂದು ಕರೆಂಟ್ ಕಂಬ ಹೇರಿ ಲೈನ್​ಗಳ ಮೇಲೆ ಮಲಗಿದ್ದಾನೆ.

ಆಂಧ್ರ ಪ್ರದೇಶದ ಪಾರ್ವತಿಪುರಂ ಮಾನ್ಯಂ ಜಿಲ್ಲೆಯ ಪಾಲಕೊಂಡ ಮಂಡಲದ ಎಂ.ಸಿಂಗುಪುರಂನಲ್ಲಿ ಈ ಘಟನೆ ನಡೆದಿದ್ದು ಯಜ್ಜಲ ವೆಂಕಣ್ಣ ಎಂಬಾತ ಮದ್ಯ ಖರೀದಿಗೆ ಹಣ ನೀಡುವಂತೆ ತಾಯಿಗೆ ಒತ್ತಡ ಹೇರಿ, ಕರೆಂಟ್ ಕಂಬ ಹತ್ತಿ ವಿದ್ಯುತ್ ತಂತಿಗಳ ಮೇಲೆ ಮಲಗಿ ಅವಾಂತರ ಸೃಷ್ಟಿಸಿದ್ದಾನೆ.

ಇನ್ನು ವೆಂಕಣ್ಣ ಕರೆಂಟ್ ಕಂಬ ಏರುತ್ತಿದ್ದಂತೆಯೇ ಎಚ್ಚೆತ್ತ ಗ್ರಾಮಸ್ಥರು ವಿದ್ಯುತ್ ಡಿಪಿ ಸ್ವಿಚ್ ಆಫ್ ಮಾಡಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಆತನ ಜೀವ ಉಳಿದಿದೆ.ಕೊನೆಗೆ ಏನೇನೋ ಹೇಳಿ ಗ್ರಾಮಸ್ಥರು ಕಷ್ಟಪಟ್ಟು ವೆಂಕಣ್ಣನನ್ನು ಕೆಳಗಿಳಿಸಿ ನಿಟ್ಟುಸಿರು ಬಿಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

Edited By : Nirmala Aralikatti
PublicNext

PublicNext

02/01/2025 05:56 pm

Cinque Terre

60.67 K

Cinque Terre

0