ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಬೇಕು ಎಂದು ಪಕ್ಷಾತೀತವಾಗಿ 10 ವರ್ಷಗಳ ಕಾಲ ಹೋರಾಟ ಮಾಡಲಾಗಿತ್ತು. ಈ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.
ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ಆ ಮೂಲಕ ಧಾರವಾಡಿಗರ ಬಹುದಿನಗಳ ಕನಸು ಈಡೇರಿದಂತಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
02/01/2025 06:36 pm