ಬೆಂಗಳೂರು: ನಗರದ ಹೊರವಲಯದ ಹೆಬ್ಬಗೋಡಿಯ ಕೆಮಿಕಲ್ ಮತ್ತು ಗಾರ್ಮೆಂಟ್ಸ್ ಗೋದಾಮಿಗೆ ಬೆಂಕಿ ಬಿದ್ದಿದೆ. ನಾಲ್ಕು ಗಾರ್ಮೆಂಟ್ಸ್ ಕಾರ್ಖಾನೆಗಳಿರುವ ಕಾಂಪೌಂಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. Sewing system pvt Ltd, ಓರಿಯನ್ ಅಪೇರೆಲ್ಸ್, IIGM ಗೆ ಸೇರಿದ ಗೋದಾಮಿಗೆ ಬೆಂಕಿ ಕಾಣಿಸಿಕೊಂಡಿದೆ.
ಗಾರ್ಮೆಂಟ್ಸ್ ಕಾಂಪೌಂಡ್ ಪಕ್ಕದಲ್ಲಿರುವ ಸಾಯಿ ವಿಶ್ರಾಮ್ ಹೊಟೇಲ್ ಗೂ ಬೆಂಕಿ ಕೆನ್ನಾಲಿಗೆ ಆವರಿಸಿದೆ. ಬೆಂಕಿಯ ರಭಸಕ್ಕೆ ಗೋದಾಮುಗಳು ಧಗಧಗನೇ ಹೊತ್ತಿ ಉರಿದಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗೋದಾಮಿನಲ್ಲಿ ಬಟ್ಟೆ, ಲೆದರ್ ಸೇರಿದಂತೆ ಕೆಮಿಕಲ್ ವಸ್ತುಗಳನ್ನು ದಾಸ್ತಾನು ಮಾಡಲಾಗಿದ್ದು, ಬೆಂಕಿ ನಿಯಂತ್ರಣಕ್ಕೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
PublicNext
02/01/2025 07:48 pm