ಉಡುಪಿ: ಶ್ರೀಕೃಷ್ಣಮಠದಲ್ಲಿ 'ವಿಜಯೀಭವ' ಕಾರ್ಯಕ್ರಮವು ಜನವರಿ 4ರಂದು ಬೆಳಗ್ಗೆ 10ರಿಂದ ನಡೆಯಲಿದೆ. 2025 ಮಾರ್ಚ್/ಏಪ್ರಿಲ್ ತಿಂಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪ್ರೇರಣೆ/ಮಾರ್ಗದರ್ಶನ ನೀಡುವ ಕಾರ್ಯಕ್ರಮವನ್ನು ಪರ್ಯಾಯ ಪುತ್ತಿಗೆ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸುವರು.
ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಪರೀಕ್ಷೆ ಎದುರಿಸುವ ಕುರಿತು ಮಾರ್ಗದರ್ಶನ ಮಾಡುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಗಣಪತಿ ಕೆ. ಅಧ್ಯಕ್ಷತೆ ವಹಿಸುವರು. ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುಮಾರ್ ಕೋಟ, ಎಸ್‍ಎಂಎಸ್‍ಪಿ ಸಂಸ್ಕೃತ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಷಣ್ಮುಖ ಹೆಬ್ಬಾರ್, ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಅಶೋಕ್ ಕುಮಾರ್ ಶೆಟ್ಟಿ ಮಟಪಾಡಿ ಸಂಪನ್ಮೂಲ ವ್ಯಕ್ತಿಗಳಾಗಿದ್ದು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಪ್ರೇರಣಾದಾಯಕ ಮಾತುಗಳನ್ನಾಡಲಿದ್ದಾರೆ.
Kshetra Samachara
02/01/2025 08:00 pm