ಚಿಕ್ಕಮಗಳೂರು : ನೂರು ಕೋಟಿ ರೂ. ವೆಚ್ಚದಲ್ಲಿ ದತ್ತಪೀಠ ಅಭಿವೃದ್ಧಿ ಪಡಿಸಲು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರೊಂದಿಗೆ ಚರ್ಚಿಸಿದ್ದು, ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದು ಒಂದು ವಾರದಲ್ಲಿ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಲಿದೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಜಿಲ್ಲೆಯ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಪೂ ರ್ಣಗೊಳಿಸುವಂತೆ ಸಂಬಂಧಪಟ್ಟ ರೊಂದಿಗೆ ಚರ್ಚಿಸಲಾಗಿದೆ. ಜಿಲ್ಲೆಯಲ್ಲಿ ರೈಲ್ವೇ ಸಂಪರ್ಕ ವಿಸ್ತರಣೆ ಸಂಬಂಧ ರಾಜ್ಯ ರೈಲ್ವೇ ಸಚಿವರಾದ ವಿ. ಸೋಮಣ್ಣ ಅವರೊಂದಿಗೂ ಚರ್ಚಿ ನಡೆಸಲಾಗಿದೆ. ಚಿಕ್ಕಮಗಳೂರಿನಿಂದ ಬೆಂಗಳೂರು, ತಿರುಪತಿ ನೂತನ ರೈಲು ಮಂಜೂರು ಮಾಡುವಂತೆ ಕೋರಲಾಗಿದೆ ಎಂದರು. ಸರ್ಫೆಸಿ ಕಾಯ್ದೆಯಡಿಯಲ್ಲಿ ಕಾಫಿಬೆಳೆಗಾರರ ಸುಸ್ತಿ ಸಾಲಗಾರರ ಬೆಳೆ ಮತ್ತು ಜಮೀನು ಆನ್‌ಲೈನ್ ಮೂಲಕ ಹರಾಜು ಹಾಕಲಾಗುತ್ತಿತ್ತು. ಪಾರ್ಲಿಮೆಂಟ್ ಅಧಿವೇಶನದಲ್ಲಿ ಈ ಸಂಬಂಧ ಪ್ರಶ್ನಿಸಿದ್ದು, ಸರ್ಫೆಸಿ ಕಾಯ್ದೆ ಕಾಫಿ ಬೆಳೆಗಾರರಿಗೆ ಅನ್ವಯವಾಗುವುದಿಲ್ಲ ವೆಂದು ಸಂಬಂಧಪಟ್ಟ ಇಲಾಖೆ ಮಂತ್ರಿಗಳು ತಿಳಿಸಿದ್ದಾರೆ. ಇದರಿಂದ ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ಕಾಫಿ ಬೆಳೆಯುವ ಬೆಳೆಗಾರರಿಗೆ ಶಕ್ತಿ ಬಂದಂತಾಗಿದೆ ಎಂದು ಹೇಳಿದರು. 2500 ಕೋಟಿ ರೂ. ಕಾಫಿ ಬೆಳೆಗಾರರು ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿದ್ದಾರೆ. ಅದರಲ್ಲಿ ಕೆನರಾ ಬ್ಯಾಂಕ್ ವೊಂದರಲ್ಲಿಯೇ 1600 ಕೋಟಿ ರೂ. ಸಾಲ ಪಡೆದುಕೊಂಡಿದ್ದು, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ 817 ಬೆಳೆಗಾರರು ಒನ್ ಟೈಮ್ ಸೆಟ್ಲ ಮೆಂಟ್‌ಗೆ ಅರ್ಹರಿದ್ದು, 142 ಜನ ಬೆಳೆಗಾರರು ಒನ್ ಟೈನ್ ಸೆಟ್ಲಮೆಂಟ್ ಮಾಡಿಕೊಂಡಿದ್ದಾರೆ ಎಂದರು.
ಉಪಗ್ರಹದ ಮೂಲಕ ಬಿಎಸ್‌ಎನ್‌ಎಲ್ ಸಂಪರ್ಕ ನೀಡುವಂತೆ ಸಂಬಂಧಪಟ್ಟ ಇಲಾಖೆ ಸಚಿವರಿಗೆ ಪ್ರಸ್ತಾವನೆಯನ್ನು ಮುಂದಿಡಲಾಗಿದೆ. ಜಿಲ್ಲೆಯಲ್ಲಿ ಮೂರು ಎಫ್.ಎಂ. ಸ್ಟೇಷನ್ ಮಂಜೂರಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ತಾಲೂಕು ಮಟ್ಟದಲ್ಲಿ ಶಾಸಕರನ್ನು ಒಳಗೊಂಡ ಸಭೆಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದರು
PublicNext
02/01/2025 08:34 pm