ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ‌ ಬಂದ್‌ಗೆ ಜಿಲ್ಲಾ ಕಾಂಗ್ರೆಸ್ ‌ಪಕ್ಷ‌ ಬೆಂಬಲ‌ - ಲಕ್ಷ್ಮೀನಾರಾಯಣ್‌

ಕೋಲಾರ : ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿರುವ ಕೇಂದ್ರದ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಜ.3 ರಂದು ಶುಕ್ರವಾರ ಪ್ರಗತಿಪರ ಮತ್ತು ದಲಿತ ಸಂಘಟನೆಗಳು ಕರೆ ನೀಡಿರುವ ಕೋಲಾರ ಬಂದ್ ಗೆ ಜಿಲ್ಲಾ ಕಾಂಗ್ರೆಸ್ ಪಕ್ಷವು ಬೆಂಬಲಿಸಲಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ ಪಕ್ಷದ ಸರ್ವಾಧಿಕಾರಿ ದೋರಣೆ ಹೆಚ್ಚಾಗಿದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಇದೆಯೋ ಇಲ್ಲವೋ ಎಂಬ ಅನುಮಾನ ಮೂಡಿದೆ. ಅಂಬೇಡ್ಕರ್ ಬಗ್ಗೆ ತುಚ್ಛವಾಗಿ ಮಾತನಾಡಿರುವ ಶಾ ದೇಶ ತಲೆ ತಗ್ಗಿಸುವ ರೀತಿ ವರ್ತಿಸಿದ್ದಾರೆ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಮಹಾತ್ಮ ಗಾಂಧಿಯವರ ಅಷ್ಟೇ ಸಾಮಾಜಿಕ ನ್ಯಾಯದ ಅಡಿಯಲ್ಲಿ ಸಂವಿಧಾನ ರಚನೆಕಾರ ಅಂಬೇಡ್ಕರ್ ಕೂಡ ಪ್ರಮುಖವಾಗಿದ್ದಾರೆ ಅಂತಹ ಬಗ್ಗೆ ಅವಹೇಳನ ಖಂಡನೀಯ ನಡೆ ನುಡಿ ಸರಿ ಇಲ್ಲದ ಬಿಜೆಪಿಯವರು ಸಂವಿಧಾನ ವಿರೋಧಿಗಳು ಎಂದು ಆರೋಪಿಸಿದರು.

Edited By : PublicNext Desk
PublicNext

PublicNext

02/01/2025 09:21 pm

Cinque Terre

50.68 K

Cinque Terre

0