ಮಂಗಳೂರು: ಚಾಕು ತೋರಿಸಿ ಮೆಡಿಕಲ್ ಶಾಪ್‌ನ ಕ್ಯಾಶ್ ಡ್ರಾವರ್‌ನಲ್ಲಿದ್ದ ಹಣ ಸುಲಿಗೆಗೈದ ಆರೋಪಿಯನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬೊಂದೇಲ್‌ನ ಪಟ್ರಕೋಡಿ ನಿವಾಸಿ ಸುನೀಲ್ (31) ಬಂಧಿತ ಆರೋಪಿ.
ಡಿಸೆಂಬರ್ 28ರಂದು ಮಧ್ಯಾಹ್ನ ಮಂಗಳೂರಿನ ನಾಗುರಿ ಮೆಡಿಕಲ್ ಶಾಪ್‌ವೊಂದಕ್ಕೆ ಆರೋಪಿ ಸುನಿಲ್ ಹೋಗಿದ್ದಾನೆ. ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿದ ಈತ ಹಲ್ಲೆ ನಡೆಸಿ ಶಾಪ್‌ನ ಕ್ಯಾಶ್ ಡ್ರಾವರ್‌ನಲ್ಲಿದ್ದ 19,300ರೂ. ನಗದು ಸುಲಿಗೆ ಮಾಡಿ ಪರಾರಿಯಾಗಿದ್ದಾನೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಸಿದಂತೆ ಆರೋಪಿಯ ಪತ್ತೆಗೆ ತಂಡವನ್ನು ರಚಿಸಿ ತನಿಖೆ ನಡೆಸಲಾಗಿತ್ತು. ಅದರಂತೆ ಗುರುವಾರ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನಿಂದ ಕಳವು ಮಾಡಿದ 17,500ರೂ. ಹಣ, ಸುಲಿಗೆ ಮಾಡಲು ಬಳಸಿದ ಸ್ಕೂಟರ್ ಹಾಗೂ ಇತರ ಸೊತ್ತುಗಳನ್ನು ಸೇರಿಸಿ ಒಟ್ಟು 1,20,000ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿ ಕೊಂಡಿದ್ದಾರೆ.
Kshetra Samachara
02/01/2025 10:22 pm