ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ರಿಕ್ಷಾಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಜೈಲು ಶಿಕ್ಷೆ

ಸುಳ್ಯ: ಇಲ್ಲಿನ ಆಲೆಟ್ಟಿ ಎಂಬಲ್ಲಿ ರಿಕ್ಷಾಕ್ಕೆ ಕೆಎಸ್ಆರ್‌ಟಿಸಿ ಬಸ್‌ ಡಿಕ್ಕಿಯಾದ ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ಹಿರಿಯ ಸಿವಿಲ್‌ ಜಡ್ಜ್ ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯದ, ಬಸ್‌ ಚಾಲಕ ಗೋಪಾಲ ಎಂಬಾತನಿಗೆ ಒಂದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

2023ರ ಎ.11ರಂದು ಬೆಳಗ್ಗೆ ಆಲೆಟ್ಟಿ ಗ್ರಾಮದ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆ.ಎಸ್‌.ಆರ್‌.ಟಿ.ಸಿ. ಬಸ್ಸು ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಸಾಗುತ್ತಿತ್ತು. ಈ ವೇಳೆ ಓವರ್‌ಟೇಕ್‌ ಮಾಡುವ ಭರದಲ್ಲಿ ಬಸ್‌ ಸುಳ್ಯ ಕಡೆಗೆ ಹೋಗುತ್ತಿದ್ದ ರಿಕ್ಷಾದ ಹಿಂಬದಿಗೆ ಢಿಕ್ಕಿಯಾಗಿತ್ತು. ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಷ್ಪಾವತಿ ಎಂಬವರು ಗಾಯಗೊಂಡಿದ್ದರು.

ಈ ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿ, ನ್ಯಾಯಾಲಯದ ಮೆಟ್ಟಿಲೇರಿತ್ತು. ಸುಳ್ಯದ ಹಿರಿಯ ಸಿವಿಲ್‌ ಜಡ್ಜ್ ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯದ ನ್ಯಾಯಾಧೀಶ ಬಿ.ಮೋಹನ್‌ಬಾಬು ಪ್ರಕರಣದ ವಿಚಾರಣೆ ನಡೆಸಿ ಬಸ್‌ ಚಾಲಕ ತಪ್ಪಿತಸ್ಥ ಎಂದು ಘೋಷಿಸಿದ್ದಾರೆ. ತಪ್ಪಿತಸ್ಥ ಬಸ್ ಚಾಲಕನಿಗೆ ವಿವಿಧ ಸೆಕ್ಷನ್‌ಗಳಡಿಯಲ್ಲಿ ಒಂದು ತಿಂಗಳ ಸಾದಾ ಜೈಲು ಶಿಕ್ಷೆ ಮತ್ತು 1000 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರಕಾರದ ಪರವಾಗಿ ಪ್ರಕರಣವನ್ನು ಸಹಾಯಕ ಅಭಿಯೋಜಕರು ವಾದಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

02/01/2025 10:22 pm

Cinque Terre

6.48 K

Cinque Terre

0

ಸಂಬಂಧಿತ ಸುದ್ದಿ