Exclusive......
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ ಯಳ್ಳೂರ ಮೇಲೆ ಮಹಿಳಾ ಪೊಲೀಸ್ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿರುವ ಮೂಕರ್ಜಿ, ಮತ್ತು ದೂರು ನೀಡಲು ಬಂದಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳದ ಆರೋಪದಡಿ, ನಿಮ್ಮ ಪಬ್ಲಿಕ್ ನೆಕ್ಸ್ಟ್ ನಿರಂತರ ಸುದ್ದಿಯನ್ನು ಬಿತ್ತರಿಸಿತ್ತು. ಈ ಸುದ್ದಿಗೆ ಈಗ ಪ್ರತಿಫಲ ಸಿಕ್ಕಿದೆ. ಅಂದ್ರೆ ಆರೋಪದ ಹಣೆಪಟ್ಟಿ ಹೊತ್ತಿದ್ದ ಇನ್ಸ್‌ಪೆಕ್ಟರ್ ಸುರೇಶ ಯಳ್ಳೂರನನ್ನು ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಅವರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಹಳೇ ಹುಬ್ಬಳ್ಳಿ ಥಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ ಯಳ್ಳೂರ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯದ ಬಗ್ಗೆ ಅವರ ಠಾಣೆಯ ಮಹಿಳಾ ಸಿಬ್ಬಂದಿ ಮೂಕರ್ಜಿ ಬರೆದು ತಮ್ಮ ಅಳಲು ತೋಡಿಕೊಂಡಿದ್ದರು. ಅಷ್ಟೇ ಅಲ್ಲದೇ ಮಹಿಳೆಯೊಬ್ಬರು ತಮ್ಮ ಮಗಳ ಕಿಡ್ನಾಪ್ ಬಗ್ಗೆ ಠಾಣೆಗೆ ದೂರು ಕೊಡಲು ಹೋದ್ರೆ ಆ ಮಹಿಳೆಯೊಂದಿಗೂ ಕೂಡ ಇನ್ಸ್‌ಪೆಕ್ಟರ್ ಅಸಭ್ಯವಾಗಿ ವರ್ತನೆ ಮಾಡಿದ್ದರಂತೆ. ಈ ಬಗ್ಗೆ ಆ ಗೌರವಾನ್ವಿತ ಮಹಿಳೆ ಪೊಲೀಸ್ ಕಮೀಷನರ್, ಹೋಮ್ ಮಿನಿಸ್ಟರ್, ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್‌ನಲ್ಲಿ ಮಹಿಳೆಯರಿಗೆ ಆದ ಅನ್ಯಾಯದ ಬಗ್ಗೆ ನಿರಂತರ ವರದಿಯನ್ನು ಬಿತ್ತರಿಸಲಾಗಿತ್ತು. ವರದಿ ನೋಡಿದ ಹೋಮ್ ಮಿನಿಸ್ಟರ್ ಈ ಘಟನೆ ಬಗ್ಗೆ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆಂದು ಹೇಳಿದ್ದರು. ಇಂದು ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಅವರು ಇನ್ಸ್‌ಪೆಕ್ಟರ್ ಸುರೇಶ ಯಳ್ಳೂರನನ್ನು ಎತ್ತಂಗಡಿ ಮಾಡಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಿಂದ ನಗರ ನಿಯಂತ್ರಣ ಕೊಠಡಿ ಕಮಿಷನರ್ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಇನ್ಸ್‌ಪೆಕ್ಟರ್ ಸುರೇಶ್ ಯಳ್ಳೂರ ಕಾಮಪುರಾಣದ ಆರೋಪದ ಬಗ್ಗೆ ಪಬ್ಲಿಕ್ ನೆಕ್ಸ್ಟ್‌ದಲ್ಲಿ ವರದಿಯನ್ನು ಬಿತ್ತರಿಸುತ್ತಿದ್ದಂತೆ, ತನಿಖೆಗಳು ಆರಂಭವಾದವು. ಈಗ ಕಮಿಷನರ್ ಸೂಕ್ತ ಕ್ರಮ ಕೈಗೊಂಡು ಇನ್ಸ್‌ಪೆಕ್ಟರ್ ಸುರೇಶ ಯಳ್ಳೂರನನ್ನು ವರ್ಗಾವಣೆ ಮಾಡಿ, ಆ ಮಹಿಳಾ ಸಿಬ್ಬಂದಿ, ಮತ್ತು ನೊಂದ ಮಹಿಳೆಗೆ ನ್ಯಾಯ ಕೊಡಿಸಿದೆ. ಇದು ಪಬ್ಲಿಕ್ ನೆಕ್ಸ್ಟ್ ಪವರ್ ಫುಲ್ ವರದಿ.
ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
02/01/2025 10:36 pm