ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ ನಗರ ಬಂದ್ ಕರೆ

ಕೋಲಾರ - ಸಂಸತ್ ಭವನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿರುವುದನ್ನು ಖಂಡಿಸಿ‌ ಇಂದು ವಿವಿಧ ದಲಿತ ಪರ ಸಂಘಟನೆಗಳು, ಪ್ರಗತಿ ಪರ ಸಂಘಟನೆಗಳು‌ ಕೋಲಾರ ನಗರವನ್ನು ಬಂದ್ ಮಾಡಿ ಅಮಿತ್ ಶಾ ರವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಪ್ರತಿಭಟನಾಕರರು ಒತ್ತಾಯಿಸಿದರು.

ಕೋಲಾರ ನಗರ ಬಂದ್ ಹಿನ್ನೆಲೆ ಅಂಗಡಿ ಮುಂಗಟ್ಟುಗಳು, ಹೋಟೆಲ್, ಆಟೋ, ಬಸ್ ಸಂಚಾರವನ್ನು ಬಂದ್ ಮಾಡಲಾಗಿದ್ದು, ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ವಿವಿಧ ರಸ್ತೆಗಳು ಬಿಕೋ ಎನ್ನುತ್ತಿತ್ತು.‌ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್ ಗಳಿಲ್ಲದೆ ನಡೆದುಕೊಂಡೆ ಹೋಗುತ್ತಿದ್ದರು. ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನ್ನು ಏರ್ಪಡಿಸಲಾಗಿತ್ತು.

Edited By : PublicNext Desk
Kshetra Samachara

Kshetra Samachara

03/01/2025 08:04 am

Cinque Terre

360

Cinque Terre

0