ಬೆಳಗಾವಿ: ರಾಷ್ಟ್ರಪತಿ ದೌಪದಿ ಮುರ್ಮು ಶುಕ್ರವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ದೌಪದಿ ಮುರ್ಮು ಇಂದು ಸಂಜೆಯೇ ದೆಹಲಿಗೆ ವಾಪಸಾಗಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ದೌಪದಿ ಮುರ್ಮು ನಿಮ್ಹಾನ್ಸ್ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಬೆಳಗಾವಿಗೆ ತೆರಳಿ ಜಾಗತಿಕ ಗುಣಮಟ್ಟದ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಿತವಾಗಿರುವ ನೂತನ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹೋಟ್, ಸೇರಿದಂತೆ ಕೇಂದ್ರ ಸಚಿವರು ಹಾಗೂ ಹಲವು ಶಾಸಕರು, ಸಂಸದರು ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
PublicNext
03/01/2025 09:06 am