ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ: ಪ್ರವಾಸಿ ವಾಹನಗಳಿಂದ ಹಣ ಸುಲಿಗೆ- ಮೂವರು ಪೊಲೀಸರ ಅಮಾನತು

ಮಂಡ್ಯ: ಪ್ರವಾಸಿಗರ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಮುಖ್ಯ ಪೇದೆ ಸೇರಿದಂತೆ ಮೂವರು ಪೊಲೀಸ್ ಪೇದೆ ಗಳನ್ನು ಅಮಾನತ್ತು ಮಾಡಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಶ್ರೀರಂಗಪಟ್ಟಣ ತಾಲ್ಲೂಕು ಕೆಆರ್‌ಎಸ್ ಪೊಲೀಸ್ ಠಾಣೆಯ ಮುಖ್ಯಪೇದೆ ಪುರುಷೋತ್ತಮ್ ಹಾಗೂ ಪೇದೆಗಳಾದ ಅನಿಲ್ ಕುಮಾ‌ರ್ ಹಾಗೂ ಪ್ರಭಸ್ವಾಮಿ ಅಮಾನತ್ತುಗೊಂಡವರು.

ಈ ಮೂವರು ಕೆಆರ್‌ಎಸ್‌ ವೀಕ್ಷಣೆಗಾಗಿ ಬರುವ ಪ್ರವಾಸಿಗರ ವಾಹನಗಳಿಂದ ಅದರಲ್ಲೂ ಹೆಚ್ಚಾಗಿ ಹೊರ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ಇತರೆಡೆಗಳಿಂದ ಬರುತ್ತಿದ್ದ ವಾಹನಗಳನ್ನು ಗುರಿಯಾಗಿಸಿಕೊಂಡು ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದರು.

ಈ ಬಗ್ಗೆ ಸಾರ್ವಜನಿಕರು ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಣ ವಸೂಲಿ ಕುರಿತು ವೀಡಿಯೋ ಹರಿ ಬಿಟ್ಟಿದ್ದರು. ಜೊತೆಗೆ ಸಾರ್ವಜನಿಕರು ಸಹ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದರು, ಈ ಸಂಬಂಧ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಈ ಮೂವರನ್ನೂ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Edited By : Ashok M
PublicNext

PublicNext

03/01/2025 09:10 am

Cinque Terre

36.72 K

Cinque Terre

0

ಸಂಬಂಧಿತ ಸುದ್ದಿ