ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ - ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನ

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕೊಡವ ಮಹಿಳೆಯರ ಬಗ್ಗೆ ಅಶ್ಲೀಲ ಪದಗಳನ್ನು ಬಳಸಿ ಅವಮಾನ ಮಾಡಿದ ಕುಶಾಲನಗರ ನಿವಾಸಿ ಅನುದೀಪ್ ಆಲಿಯಾಸ್ ಡುಮ್ಮಿ ಎಂಬಾತನನ್ನು ಪೊಲೀಸರು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷ ಮತ್ತು ಕಾರ್ಯದರ್ಶಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಕಟ್ಟೆಮಾಡು ದೇವಸ್ಥಾನದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಚಪ್ಪ ಮತ್ತು ಅಯ್ಯಪ್ಪ ಎಂಬವರು ಸಾಮಾಜಿಕ ಜಾಲತಾಣಗಳಲ್ಲಿ ಜನಾಂಗದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪದಗಳನ್ನು ಬಳಸಿದ್ದರು. ಈ ಬಗ್ಗೆ ಕುಶಾಲನಗರ ಗೌಡ ಸಮಾಜ ಪ್ರಮುಖರು ಕುಶಾಲನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಪೊಲೀಸರು ಅಯ್ಯಪ್ಪ ಎಂಬಾತನನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

Edited By : Vijay Kumar
Kshetra Samachara

Kshetra Samachara

03/01/2025 09:26 am

Cinque Terre

1.98 K

Cinque Terre

0

ಸಂಬಂಧಿತ ಸುದ್ದಿ