ಬಸವಕಲ್ಯಾಣ: ಬೈಕ್ ಗೆ ಸ್ಕಾರ್ಪಿಯೋ ವಾಹನ ಡಿಕ್ಕಿಯಾಗಿ ದಂಪತಿ ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ-65ರ ಯರಬಾಗ್ ಕ್ರಾಸ್ ಬಳಿ ಸಂಭವಿಸಿದೆ. ತಾಲೂಕಿನ ನಾರಾಯಣಪುರ ಗ್ರಾಮದ ನಿವಾಸಿಗಳಾದ ಪ್ರಕಾಶ ರೇಕುಳಗೆ(50) ಹಾಗೂ ಪತ್ನಿ ಬಬಿತಾ((45) ಮೃತಪಟ್ಟವರು.
ದಂಪತಿ ಇಟಗಾ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭ ಯರಬಾಗ್ ಕ್ರಾಸ್ ಬಳಿ ಬೈಕ್ ಗೆ ಮುಂಬೈ ಕಡೆಯಿಂದ ವೇಗವಾಗಿ ಬಂದ ಸ್ಕಾರ್ಪಿಯೋ ವಾಹನ ಡಿಕ್ಕಿಯಾಗಿ ದುರಂತ ಘಟಿಸಿದೆ. ಅಪಘಾತದಲ್ಲಿ ಬಬಿತಾ ಸ್ಥಳದಲ್ಲೇ ಮೃತಪಟ್ಟರೆ ಪ್ರಕಾಶ್ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಸ್ಕಾರ್ಪಿಯೋ ವಾಹನ ಚಾಲಕನಿಗೆ ಹುಮ್ನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಪಿಐ ಅಲಿಸಾಬ್, ಸಂಚಾರಿ ಠಾಣೆ ಪಿಎಸ್ಐ ಸಿದ್ದೇಶ್ವರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
03/01/2025 12:06 pm