ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಸಿಡ್ನಿ ಮೈದಾನದಲ್ಲಿ ಇಂದಿನಿಂದ ನಡೆಯುತ್ತಿರುವ ಐದನೇ ಮತ್ತು ಅಂತಿಮ ಟೆಸ್ಟ್ನಲ್ಲಿ ಭಾರತ ಕೇವಲ 185 ರನ್ ಗಳಿಸಿ ಆಲೌಟ್‌ಗೆ ತುತ್ತಾಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ಗಿಳಿದ ಟೀಂ ಇಂಡಿಯಾ 120 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ನಂತರ 65 ರನ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡಿದೆ. ಇಂದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಕೆ.ಎಲ್.ರಾಹುಲ್, ಯಶಸ್ವಿ ಜೈಸ್ವಾಲ್, ನಿತೀಶ್ ಕುಮಾರ್ ರೆಡ್ಡಿ ಅಲ್ಪಮೊತ್ತಕ್ಕೆ ಪೆವಿಲಿಯನ್ ಸೇರಿದರು. ರಿಷಬ್ ಪಂತ್ ಹಾಗೂ ರವೀಂದ್ರ ಜಡೇಜಾ ಸ್ವಲ್ಪಮಟ್ಟಿಗೆ ರನ್ ಕಲೆ ಹಾಕಿ ತಂಡಕ್ಕೆ ಆಸರೆಯಾದರು.
PublicNext
03/01/2025 12:13 pm