ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಜೀಪ್ ಪಲ್ಟಿ - ಓರ್ವ ಕಾರ್ಮಿಕ ಸಾವು

ಬೇಲೂರು: ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಜೀಪ್ ಪಲ್ಟಿಯಾಗಿ ಓರ್ವ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿ ಮೂವರು ಮಕ್ಕಳು ಸೇರಿ ಏಳು ಮಂದಿಗೆ ಗಾಯಗಳಾಗಿರುವ ಘಟನೆ ಬೇಲೂರು ತಾಲ್ಲೂಕಿನ, ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆಲಿ (29) ಮೃತಪಟ್ಟ ಕೂಲಿ ಕಾರ್ಮಿಕ. ಯೋಗೇಶ್ ಗೌಡ ಎಂಬುವವರ ತೋಟದಲ್ಲಿ ಕಾಫಿ ಕೊಯ್ಲು ಕೆಲಸ ಮುಗಿಸಿಕೊಂಡು ಜೀಪ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ, ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಯ ತಪ್ಪಿ ರಸ್ತೆ ಬದಿಗೆ ಜೀಪ್ ಪಲ್ಟಿಯಾಗಿದೆ.

MYC 8203 ನಂಬರ್‌ನ ಹಳೆಯ ಜೀಪ್ ಆಗಿದ್ದು, ಕೂಲಿ ಕಾರ್ಮಿಕರು ಎಲ್ಲರೂ ಅಸ್ಸಾಂ ಮೂಲದವರು ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Vinayak Patil
PublicNext

PublicNext

03/01/2025 12:58 pm

Cinque Terre

39.66 K

Cinque Terre

1