ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿರಾಜಪೇಟೆ: ಬಿಳುಗುಂದ ಗ್ರಾಮದಲ್ಲಿ ಒಂಟಿ ಸಲಗದ ಹಾವಳಿ, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ

ವಿರಾಜಪೇಟೆ: ವಿರಾಜಪೇಟೆ ಸಮೀಪದ ಬಿಳುಗುಂದ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದ ಒಂಟಿ ಸಲಗವೊಂದು ಕಾಫಿ ತೋಟ, ಗದ್ದೆ ಹಾಗೂ ಮನೆಯ ಸಮೀಪ ಪ್ರತ್ಯಕ್ಷವಾಗುತ್ತಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಬಿಳುಗುಂದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಐನಂಡ ಪ್ರತಾಪ್ ರವರು ಕರ್ನಾಟಕ ವನ್ಯಜೀವಿ ಮಂಡಳಿ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಒಂಟಿ ಸಲಗ ಓಡಾಡಿದ ಸ್ಥಳ ಪರಿಶೀಲನೆ ನಡೆಸಿದರು.

ಕಾಡಾನೆಯನ್ನು ಅರಣ್ಯಕ್ಕೆ ಅಟ್ಟುವ ಕಾರ್ಯ ಈಗಾಗಲೇ ನಡೆಯುತ್ತಿದೆ. ಸಾಕಾನೆಗಳನ್ನು ಬಳಸಿ ಕಾಡಾನೆ ಕಾರ್ಯಾಚರಣೆ ಮಾಡಲು ಗ್ರಾಮ ಪಂಚಾಯತಿ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಿ ಹಾಗೂ ಗ್ರಾಮಸ್ಥರು ಸಹ ಸಭೆ ನಡೆಸಿ ಮಾಹಿತಿ ನೀಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ಸಮಯದಲ್ಲಿ ಸಾಕಾನೆ ಬಳಸಿ ಕಾಡಾನೆ ಕಾರ್ಯಾಚರಣೆ ಮಾಡಿದಲ್ಲಿ ಕಾಫಿ ಬೆಳೆ ಹಾನಿಯಾಗುವ ಸಾಧ್ಯತೆ ಹೆಚ್ಚು ಎಂದು ತಿಳಿಸಿದರು.

ಈ ಸಂದರ್ಭ ಬಿಳುಗುಂದ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕೊಡಗು ಜಿಲ್ಲೆ ಕಾಂಗ್ರೆಸ್ ಅಲ್ಪ ಸಂಖ್ಯಾತರ ಜಿಲ್ಲಾ ಅಧ್ಯಕ್ಷರಾದ ಅನೀಫ್, ವಿರಾಜಪೇಟೆ ಪುರಸಭೆಯ ನಾಮ ನಿರ್ದೇಶನ ಸದಸ್ಯರಾದ ಶಬರೀಶ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಹಾಜರಿದ್ದರು.

Edited By : Suman K
Kshetra Samachara

Kshetra Samachara

03/01/2025 01:21 pm

Cinque Terre

2.82 K

Cinque Terre

0