ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಓಡಾಡೋರಿಗೆ ಶಾಕ್! ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲಾ ರೀತಿಯ ಸಾರಿಗೆ ಬಸ್ ಗಳ ದರ ಶೇ.15ರಷ್ಟು ಏರಿಕೆಯಾಗಲಿದೆ.
ಹೌದು, ವರ್ಷದ ಆರಂಭದಲ್ಲೇ ರಾಜ್ಯ ಸರ್ಕಾರ ಜನರಿಗೆ ಶಾಕ್ ಕೊಟ್ಟಿದೆ. ಮೊದಲೇ ಬೆಲೆ ಏರಿಕೆ ಬಿಸಿಯಿಂದ ಜನ ತತ್ತರಿಸಿ ಹೋಗ್ತಾ ಇದ್ರೆ ಮತ್ತೊಂದು ಕಡೆ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳ ಟಿಕೆಟ್ ರೇಟ್ ಜಾಸ್ತಿ ಮಾಡಲು ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸ್ ಟಿಕೆಟ್ ದರದ ಬಗ್ಗೆ ಚರ್ಚೆ ನಡೆದಿದ್ದು, ಟಿಕೆಟ್ ರೇಟ್ ಹೆಚ್ಚಳ ಮಾಡುವುದು ಅನಿವಾರ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡಿದ್ದಾರೆ. ಈ ಕಾರಣದಿಂದಾಗಿ ಟಿಕೆಟ್ ರೇಟ್ ಏರಿಕೆಯಾಗಲಿದೆ.
PublicNext
03/01/2025 02:08 pm