ನೆಲಮಂಗಲ: ನೆಲಮಂಗಲ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾಮಗಾರಿ ಕೆಲಸ ಚಾಲ್ತಿಯಲ್ಲಿರುವ ಕಾರಣ ಆಸ್ಪತ್ರೆಗೆ ಬರುವ ತುರ್ತು ಶಸ್ತ್ರ ಚಿಕಿತ್ಸಾ ಪ್ರಕರಣಗಳನ್ನು ಜನವರಿ 28ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ತುರ್ತು ಶಸ್ತ್ರ ಚಿಕಿತ್ಸೆಗೆ ಬರುವಂತ ರೋಗಿಗಳಿಗೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ಮತ್ತು ತ್ಯಾಮಗೊಂಡ್ಲು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಆ್ಯಂಬುಲೆನ್ಸ್ ಮೂಲಕ ರವಾನಿಸಿ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ.
ಅಲ್ಲದೆ ದುರಸ್ತಿ ಕಾರ್ಯ ಮುಗಿಯುವವರೆಗೂ ಶಸ್ತ್ರ ಚಿಕಿತ್ಸಾ ಕೊಠಡಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಆಸ್ಪತ್ರೆ ಮುಖ್ಯಾಧಿಕಾರಿ ಡಾ.ಸೋನಿಯಾ ಪಬ್ಲಿಕ್ ನೆಕ್ಸ್ಟ್ ವಾಹಿನಿಗೆ ಮಾಹಿತಿ ನೀಡಿದ್ದಾರೆ.
PublicNext
03/01/2025 02:16 pm