ಶಿವಮೊಗ್ಗ: ಎಲ್ಲ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಗುರಿ, ಕನಸು ಮತ್ತು ಪ್ರತಿಭೆಗಳು ಇರುತ್ತವೆ. ಸಮರ್ಪಕವಾದ ಯೋಜನೆ ರೂಪಿಸಿಕೊಂಡು ಅವುಗಳನ್ನು ಸಾಧಿಸಬೇಕು ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ ಹೇಳಿದ್ದಾರೆ.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ನವುಲೆಯ ಕೃಷಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ 10ನೇ ಅಂತರ ಮಹಾವಿದ್ಯಾಲಯಗಳ ಯುವ ಜನೋತ್ಸವ 2024-25 'ಯುವ ಸವಿಷ್ಕಾರ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂತರ ಕಾಲೇಜಿನ ಯುವ ಜನೋತ್ಸವ ಒಂದು ವಿಶೇಷವಾದ ಮತ್ತು ಅಪರೂಪದ ಕಾರ್ಯಕ್ರಮ. ವಿದ್ಯಾರ್ಥಿಗಳಲ್ಲಿನ ವಿವಿಧ ರೀತಿಯ ಪ್ರತಿಭೆ ಅನಾವರಣಗೊಳಿಸಲು ಇದು ಸೂಕ್ತ ವೇದಿಕೆ. ವಿದ್ಯಾರ್ಥಿಗಳಿಗೆ ಈಗ ಗುರು ಇದ್ದಾರೆ. ತಮ್ಮದೇ ಗುರಿ ಇಟ್ಟುಕೊಂಡು ಅದನ್ನು ಸಾಧಿಸುವೆಡೆ ಗಮನ ಹರಿಸಬೇಕು. ತಂದೆ ತಾಯಿಗಳು, ಶಿಕ್ಷಕರು ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಕನಸು ಕಟ್ಟಿರುತ್ತಾರೆ. ಈ ನಿಟ್ಟಿನಲ್ಲಿ ಹೆಮ್ಮೆ ಪಡುವಂತಹ ಸಾಧನೆ ಮಾಡಿರಿ. ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಬಹುದು. ಕೃಷಿಯಲ್ಲಿ ಸಹ ಉತ್ತಮ ಸಾಧನೆ ತೋರಬಹುದು. ವಿದ್ಯಾರ್ಥಿಗಳು ತಮ್ಮ ಕನಸು ಮತ್ತು ಗುರಿ ಸಾಧಿಸಲು ದೃಢ ಹೆಜ್ಜೆಗಳನ್ನು ಇಡಬೇಕು ಎಂದು ಹುರಿದುಂಬಿಸಿದರು.
PublicNext
03/01/2025 02:17 pm