ಕೊಚ್ಚಿ: ಕೇರಳದ ಕೊಚ್ಚಿ ಜವಾಹರಲಾಲ್ ನೆಹರೂ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದ ವೇಳೆ 15 ಅಡಿ ಎತ್ತರದ ವೇದಿಕೆಯಿಂದ ಬಿದ್ದು ಕೇರಳದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾನುವಾರ (ಡಿಸೆಂಬರ್ 29ರಂದು) ಕೊಚ್ಚಿಯ ಜವಾಹರಲಾಲ್ ನೆಹರೂ ಸ್ಟೇಡಿಯಂನಲ್ಲಿ ಕಾರ್ಯಕ್ರಮದಲ್ಲಿ ಸಾಮೂಹಿಕ ನೃತ್ಯ ಪ್ರದರ್ಶನಕ್ಕಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸುವ ಗುರಿಯನ್ನು ಹೊಂದಿತ್ತು.ಈ ವೇಳೆ ತೃಕ್ಕಾಕರ ಶಾಸಕಿ ಉಮಾ ಥಾಮಸ್, ವಿಐಪಿ ಗ್ಯಾಲರಿಯಿಂದ 15 ಅಡಿ ಕೆಳಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳು ಮತ್ತು ಬೆನ್ನುಮೂಳೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಉಮಾ ಥಾಮಸ್ ಅವರ ಆರೋಗ್ಯ ಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
PublicNext
03/01/2025 03:19 pm