ಚಿಕ್ಕಮಗಳೂರು : ಒತ್ತುವರಿ ಭೂಮಿ ಗುತ್ತಿಗೆ ನೀಡುವ ಸರ್ಕಾರದ ಯೋಜನೆಗೆ ಬೆಳೆಗಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಆದರೆ ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆ ಎದುರಾಗಿದ್ದು ರೈತರು ಶೃಂಗೇರಿ ತಾಲೂಕು ಕಚೇರಿಯಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಒತ್ತುವರಿ ಜಮೀನನ್ನು ಗುತ್ತಿಗೆಗೆ ನೀಡುತ್ತಿದ್ದು, ಅರ್ಜಿ ಹಾಕಲು ಬಂದಾಗ ಸರ್ವರ್ ಸಮಸ್ಯೆಯಿಂದ ಹಲವು ರೈತರು ಅರ್ಜಿ ಸಲ್ಲಿಸಲಾಗದೆ ವಾಪಾಸ್ ಹೋಗುತ್ತಿದ್ದಾರೆ. ಹೀಗಾಗಿ ಇದನ್ನು ತಕ್ಷಣ ಸರಿಪಡಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ.
Kshetra Samachara
03/01/2025 03:43 pm