ಚಿಕ್ಕಮಗಳೂರು: ರಾಜ್ಯದಲ್ಲಿ ಸರ್ಕಾರಿ ಬಸ್ ಗಳು ಸರಿಯಾದ ನಿರ್ವಹಣೆ ಇಲ್ಲದೇ ಬಸ್ ಗಳು ಡಕೋಟಾ ಆಗುತ್ತಿವೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ಕಡೂರು- ಚಿಕ್ಕಮಗಳೂರು ಮಾರ್ಗ ಮಧ್ಯದ ಸಕ್ಕರಾಯಪಟ್ಟಣದ ಬಸ್ ನಿಲ್ದಾಣದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ವೊಂದು ಕೆಟ್ಟು ನಿಂತ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಹಾಗೂ ನಿರ್ವಾಹಕ ತಳ್ಳಿಕೊಂಡು ಹೋಗಿದ್ದಾರೆ. ಇದಲ್ಲದೇ ಇತೀಚಿನ ದಿನಗಳಲ್ಲಿ ಜಿಲ್ಲೆಯ ವಿವಿಧೆಡೆ ಬಸ್ ಗಳು ಕೆಟ್ಟು ನಿಂತ ಕುರಿತು ವರದಿಯಾಗುತ್ತಿದೆ. ಹಳೆಯ ಬಸ್ಸುಗಳು ಎಲ್ಲೆಂದರಲ್ಲಿ ಕೆಟ್ಟ ನಿಲ್ಲುತ್ತಿರುವ ಪರಿಣಾಮ ವಿದ್ಯಾರ್ಥಿಗಳಿಗೆ, ಪ್ರಯಾಣಿಕರು ಕಿರಿಕಿರಿ ಅನುಭವಿಸುವಂತಾಗಿದೆ.
ಚಿಕ್ಕಮಗಳೂರು ಡಿಪ್ಪೋ ದಲ್ಲಿ 530ಕ್ಕೂ ಹೆಚ್ಚು ಬಸ್ ಗಳಿವೆ ಅಲ್ಲೊಂದು ಇಲ್ಲೊಂದು ಬಸ್ ಕೆಟ್ಟು ನಿಲ್ಲುತ್ತಿರುವುದರಿಂದ ಉಳಿದವುಗಳ ಪರಿಸ್ಥಿತಿ ಹೇಗಿದೆ ಎಂಬ ಪ್ರಶ್ನೆ ಮೂಡುವಂತಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಹೊಸ ಬಸ್ ಪ್ರಯಾಣ ದರ ಜನವರಿ 5 ರಿಂದ ಜಾರಿಗೆ ಬರಲಿದೆ.
Kshetra Samachara
03/01/2025 04:26 pm