ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಚಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯ –ಗೌಡ ಸಮುದಾಯದವರಿಂದ ಪೊಲೀಸರಿಗೆ ದೂರು

ಮಡಿಕೇರಿ: ಕೊಡವ ನ್ಯಾಷನಲ್ ಕೌನ್ಸಿಲ್‌ ಅಧ್ಯಕ್ಷ ಎನ್.ಯು. ನಾಚಪ್ಪ ಸಾಮಾಜಿಕ ಜಾಲತಾಣದಲ್ಲಿ ಕೊಡಗಿನ ಗೌಡ ಸಮುದಾಯವನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಕೊಡಗು ಗೌಡ ಯುವ ವೇದಿಕೆ ಪ್ರಮುಖರು ಹಾಗೂ ಕಟ್ಟೆಮಾಡು ಗ್ರಾಮಸ್ಥರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರಿಗೆ ದೂರು ಸಲ್ಲಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.

ಕಟ್ಟೆಮಾಡು ಗ್ರಾಮದ ಮೃತ್ಯುಂಜಯ ದೇವಾಲಯದಲ್ಲಿ ನಡೆದ ಘಟನೆಯನ್ನು ಮುಂದಿಟ್ಟುಕೊಂಡು ನಾಚಪ್ಪ ಅವರು ಗೌಡ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ಅವಹೇಳನ ಮಾಡಿದ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಜನಾಂಗೀಯ ಹಿಂಸೆಗೆ ಪ್ರಚೋದನೆ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸಂದರ್ಭ ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ, ಸಹ ಕಾರ್ಯದರ್ಶಿ ಕಾಂಚನಗೌಡ, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ಯುವಕ ಸಂಘ ಅಧ್ಯಕ್ಷ ಕೊಡಗನ ಹರ್ಷ, ಕಟ್ಟೆಮಾಡು ಗ್ರಾಮಸ್ಥರಾದ ಕಟ್ಟೆಮನೆ ಸೋನಾಜಿತ್, ಬಿದ್ರುಪಾಣೆ ಮನು, ಕೊಡಗು ಗೌಡ ಫೆಡರೇಶನ್ ಕಾರ್ಯದರ್ಶಿ ಪೇರಿಯನ ಉದಯ, ಯುವ ವೇದಿಕೆಯ ಕಾನೂನು ಸಲಹೆಗಾರ ಕೊಟ್ಟೆಗೇರಿಯನ ದಯಾನಂದ್, ಕೊಂಬಾರನ ರೋಷನ್ ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

03/01/2025 04:42 pm

Cinque Terre

1.66 K

Cinque Terre

0