ಕಾರವಾರ : ರಾಜ್ಯ ಸರಕಾರವು ಬಾಣಂತಿಯರ ಸಾವನ್ನು ಲಘುವಾಗಿ ಪರಿಗಣಿಸಿ ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿದೆ. ಹೀಗಾಗಿ ಮಹಿಳೆಯರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲದಂತಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಜಿ ಶಾಸಕಿ ರೂಪಾಲಿ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದನ್ನು ಖಂಡಿಸಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪತ್ರಿಭಟನೆಯಲ್ಲಿ ಮಾತನಾಡಿದರು.
ಬಾಣಂತಿಯರ ಸರಣಿ ಸಾವಿಗೆ ಸರಕಾರದ ಮುಖ್ಯ ಮಂತ್ರಿಗಳು ಹಾಗೂ ಮಂತ್ರಿಗಳು ನೇರ ಹೊಣೆಗಾರರು. ತಕ್ಷಣ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ ಬಾಣಂತಿಯರಿಗೆ ಪರಿಹಾರಧನ ನೀಡಬೇಕು ಜತೆಗೆ ಅವರ ಮಕ್ಕಳನ್ನು ಸರಕಾರ ದತ್ತು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಕೇಂದ್ರ ಸರಕಾರದ ಯೋಜನೆಗಳನ್ನು ಗರ್ಭಿಣಿ ಸ್ತ್ರೀಯರಿಗೆ ಸರಿಯಾಗಿ ತಲುಪಿಸಲು ವಿಫಲರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯವಸ್ಥೆ ಸರಿಪಡಿಸಬೇಕು ಎಂದೂ ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
Kshetra Samachara
03/01/2025 04:48 pm