ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಂತಿ ಭಂಗ ಮಾಡಿದರೆ ಸುಮೋಟೋ ಪ್ರಕರಣ : ಕೊಡಗು ಎಸ್ಪಿ ರಾಮರಾಜನ್ ಎಚ್ಚರಿಕೆ

ಮಡಿಕೇರಿ: ಕಟ್ಟೆಮಾಡು ಮೃತ್ಯುಂಜಯ ದೇಗುಲದಲ್ಲಿ ನಡೆದ ಘಟನೆಯ ಬಳಿಕ ಜಿಲ್ಲೆಯಲ್ಲಿ ಉಂಟಾಗಿರುವ ಸೂಕ್ಷ್ಮ ಪರಿಸ್ಥಿತಿಯ ದುರ್ಲಾಭ ಮಾಡಿಕೊಂಡು ಶಾಂತಿ ಭಂಗ ಮಾಡುವ ಪ್ರಯತ್ನ ನಡೆದರೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ಎಚ್ಚರಿಸಿದ್ದಾರೆ.

ಈಗಾಗಲೇ ಕಟ್ಟೆಮಾಡುವಿನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಶಾಂತಿ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಕಾಲಾವಕಾಶ ಕಲ್ಪಿಸಲಾಗಿದೆ. ಈ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಉಭಯ ಜನಾಂಗಗಳ ಕುರಿತು ಪರ-ವಿರೋಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿ ಶಾಂತಿ ಕದಡದಂತೆ ಮನವಿ ಮಾಡಿರುವ ಅವರು, ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶ ಹರಿಬಿಟ್ಟು ಕೋಮು ಸೌಹರ್ದತೆಯನ್ನು ಕದಡುವ ದುರುದ್ದೇಶ ಹೊಂದಿದವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು. ಜೊತೆಗೆ ಸ್ವಯಂಪ್ರೇರಿತ ಪ್ರಕರಣ ಸುಮೋಟೋ ದಾಖಲಿಸಲಾಗುವುದು.

ಸಾಮಾಜಿಕ ಜಾಲತಾಣದ ಮೇಲೆ ಪೊಲೀಸ್ ಇಲಾಖೆ ನಿಗಾ ವಹಿಸಿದೆ ಎಂದು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

03/01/2025 04:57 pm

Cinque Terre

820

Cinque Terre

0